ರಾಜ್ಯದಲ್ಲಿ ವರುಣನ (ಮಳೆ)ಆರ್ಭಟ..!

ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗಲಿದ್ದು, ಹಬ್ಬದ ಸಂಭ್ರಮಕ್ಕೆ ವರುಣ ಅಡ್ಡಿಯಾಗುವ ಸಾಧ್ಯತೆಗಳಿವೆ.

WhatsApp Group Join Now
Telegram Group Join Now

ಇನ್ನು ಕರಾವಳಿ ಭಾಗದಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆಸಮುದ್ರ ತೀರಕ್ಕೆ ದೊಡ್ಡ ಗಾತ್ರದ ಅಲೆಗಳು ಅಪ್ಪಳಿಸುತ್ತಿದ್ದು, ಪ್ರವಾಸಿಗರಿಗೆ ಮೈಕ್ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಎಚ್ಚರಿಕೆ ನಡುವೆಯೂ ಕೆಲ ಪ್ರವಾಸಿಗರು ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿಂದು ಭಯಂಕರ ಮಳೆಯಾಗುವ ಅಲರ್ಟ್ ನೀಡಲಾಗಿದೆ. ಇಂದು ಈ ಜಿಲ್ಲೆಗಳಲ್ಲಿ 50 ರಿಂದ 200 ಮಿ.ಮೀ ನಷ್ಟು ಮಳೆ ಸುರಿಯವ ಸಾಧ್ಯತೆಗಳಿವೆ..

ರಾಜ್ಯದಾದ್ಯಂತ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರದಲ್ಲಿ ಮಕ್ಕಳನ್ನು ನೋಡಿಕೊಳ್ಳಲು ತರಬೇತಿ ಪಡೆದ ‘ಕೇರ್ ಟೇಕರ್ಸ್’ ಸಹ ನಿಯೋಜನೆ ಮಾಡಲಾಗುತ್ತದೆ.

ಕೂಸಿನ ಮನೆ ಯೋಜನೆ ವಿವರ; ‘ಕೂಸಿನ ಮನೆ’ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ” ಎಂದರು.

2023-24ರ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ‘ಕೂಸಿನ ಮನೆ’ ಶಿಶುವಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

ಈ ಕೇಂದ್ರಗಳು ಸ್ಥಳೀಯ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ದಿನದಲ್ಲಿ 6 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಸ್ಥಳೀಯ ಗ್ರಾಮ ಪಂಚಾಯಿತಿಗಳೇ ಕೇಂದ್ರದ ಕಾರ್ಯನಿರ್ವಹಿಸುವ ಸಮಯವನ್ನು ನಿರ್ಧರಿಸಲಿದೆ.

4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ 10 ಜನ ಕೇರ್ ಟೇಕರ್ಸ್‌ಗಳನ್ನು (ಮಕ್ಕಳ ಆರೈಕೆದಾರರು) ಇರಲಿದ್ದಾರೆ. ಇವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುತ್ತದೆ. ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

Leave a Reply

Your email address will not be published. Required fields are marked *