ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಏಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಂಡಮಾರುತದ ನೇರ ಪರಿಣಾಮ ರಾಜ್ಯದ ಮೇಲೆ ಆಗದಿದ್ದರೂ, ಭಾರೀ ಗಾಳಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ. ಈ ಬಾರಿ ಮುಂಗಾರು ಕೈಕೊಟ್ಟಿತ್ತಾದರೂ ಹಿಂಗಾರು ಚುರುಕುಗೊಂಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಆಗಾಗ ಭಾರೀ ಮಳೆಯಾಗುತ್ತಿದೆ.
ಈ ನಡುವೆ ಚಂಡ ಮಾರುತದ ಹಿನ್ನೆಲೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವು ಕಳದೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಬೀಳಲಿದೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.ಚಂಡಮಾರುತದ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಮುಂದಿನ ನಾಲ್ಕು ದಿನಗಳ ಕಾಲ ಇಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಚಂಡಮಾರುತದ ಹಿನ್ನೆಲಯಲ್ಲಿ ಭಾರೀ ಗಾಳಿ ಮಳೆ ಎಚ್ಚರಿಕೆ ನೀಡಲಾಗಿದೆ. ಆದರೆ ಕೇರಳ ಕರಾವಳಿಯಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೇರಳ ಕರಾವಳಿಯಲ್ಲಿ ಅಂದರೆ ವಿಝಿಂಜಂನಿಂದ ಕಾಸರಗೋಡುವರೆಗೆ ಹಾಗೂ ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.