ಬೆಳೆ ವಿಮೆ ಪಡೆದುಕೊಳ್ಳಬೇಕೆಂದರೆ ಈ ಕೆಲಸವನ್ನು ಕಡ್ಡಾಯವಾಗಿ ಮಾಡಿ…! ಹೀಗೆ ಮಾಡಲು ಇದ್ದಲ್ಲಿ ಬೆಳೆವಿಮೆ ಜಮಾ ಆಗುವುದಿಲ್ಲ….!

ಹಾಗೂ ಇತರೆ ಇಲಾಖೆಗಳಿಂದ ಸರ್ಕಾರದ ಸೌಲಭ್ಯಗಳು ಮತ್ತು ಬೆಳೆ ಪರಿಹಾರ ಪಡೆದುಕೊಳ್ಳಲು ರೈತರು ‘ಫ್ರಟ್ಸ್ ಐಡಿ ಹೊಂದಿರುವುದು ಅವಶ್ಯವಾಗಿದೆ. ಜಂಟಿ ಖಾತೆ ಹೊಂದಿದ ಎಲ್ಲ ರೈತರು ಸಹ ಪ್ರತ್ಯೇಕವಾಗಿ ಐಡಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿ ಕಾರಿ ರಘುನಂದನ್‌ ಮೂರ್ತಿ ತಿಳಿಸಿದ್ದಾರೆ.

WhatsApp Group Join Now
Telegram Group Join Now

ಕಾರಣ ಐಡಿ ಹೊಂದಿರದ ರೈತರು ಬ್ಯಾಂಕ್‌ ಪಾಸ್ ಬುಕ್‌, ಅಧಾರ್ ಕಾರ್ಡ್ ಹಾಗೂ ಉತಾರ ದಾಖಲಾತಿಗಳೊಂದಿಗೆ ಹತ್ತಿರದ ಗ್ರಾಮ ಒನ್‌, ಸಾಮಾನ್ಯ ಸೇವಾ ಕೇಂದ್ರ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತುರ್ತಾಗಿ ಐಡಿ ಮಾಡಿಸಿಕೊಳ್ಳಲು ಕೋರಿದೆ. ಈಗಾಗಲೇ ಐಡಿ ಹೊಂದಿದ ರೈತರಿಗೂ ಬಾಕಿ ಇರುವ ಸರ್ವೆ ನಂಬರ್‌ಗಳನ್ನು ಸೇರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈವರೆಗೆ ಎಫ್‌ಐಡಿ ಮಾಡಿಸದೇ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ ಮಾಡಿಸಬೇಕು. ಇದಕ್ಕೆ ತಪ್ಪಿದಲ್ಲಿ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.

ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಕ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರವಾದ ವಿಸ್ತೀರ್ಣವನ್ನು ಫ್ರುಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಈ ಹಿಂದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವಿವರವನ್ನು ನಮೂದಿಸಿ, ಅದಕ್ಕನುಗುಣವಾಗಿ ಪರಿಹಾರ ಮೊತ್ತ ನೀಡುವ ವ್ಯವಸ್ಥೆ ಇತ್ತು. ಸರ್ಕಾರವು 2023 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಬೆಳೆ ಸಮೀಕ್ಷೆ ಮತ್ತು ಫ್ರುಟ್ಸ್ ನಲ್ಲಿ ನೊಂದಣಿಯಾಗಿರುವ ಬೆಳೆ ಮತ್ತು ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಿರುವುದರಿಂದ, ರೈತರು ತಮ್ಮ ಜಮೀನಿನ ಯಾವುದೇ ಸರ್ವೆ ನಂಬರ್ ಬಿಟ್ಟುಹೋಗದಂತೆ, ಎಲ್ಲಾ ಸರ್ವೆ ನಂಬರಳನ್ನು ನೊಂದಣಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಇದುವರೆಗೂ ಫ್ರುಟ್ಸ್ ನಲ್ಲಿ ನೊಂದಣಿ ಆಗದೇ ಇರುವ ರೈತರು ಆಧಾರ್ ಕಾರ್ಡ್, ಪಹಣಿ, ಜಾತಿ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ವಿವರಗಳನ್ನು ಫುಟ್‌ಸ್‌ನಲ್ಲಿ ದಾಖಲಿಸಿಕೊಂಡು ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಕೋರಲಾಗಿದೆ.

ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ತಮ್ಮ ಜಮೀನಿನ ವಿವರವನ್ನು ನೊಂದಾಯಿಸಿ, ರೈತರ ಗುರುತಿನ ಚೀಟಿ ಸಂಖ್ಯೆ ಪಡೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈ ಮಾಹಿತಿಯು ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳನ್ನು ನೀಡುವುದಲ್ಲದೆ, ಇತರೆ ಇಲಾಖೆಗಳಿಗೂ ಸಹ ಉತ್ತಮ ಮಾಹಿತಿಯಾಗಿರುತ್ತದೆ.

ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿಗಳಾಗಲು ಹಾಗೂ ಪರಿಹಾರ ಮೊತ್ತವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲು ರೈತರು ಫ್ರುಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ, ಎಫ್‌ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿದೆ.

ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫುಟ್‌ಸ್‌ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫುಟ್‌ಸ್‌ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ.

ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.

ಆಧಾರ್ ನಂಬರ್ ಹಾಕಿ ನಿಮ್ಮ FID ತಿಳಿದುಕೊಳ್ಳಿ

ಮೊದಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruitspmk.karnataka.gov.in/MISReport/GetDe tailsByAadhaar.aspx

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,search ಮೇಲೆ ಕ್ಲಿಕ್ ಮಾಡಿ.
FID-ನಿಮ್ಮ ಮೊಬೈಲ್ ನಲ್ಲೇ FID ನೊಂದಣೆ ಮಾಡುವುದು ಹೇಗೆ?

ಬೆಳೆ ಸಾಲ ಪಡೆಯುವ ಸಮಯ ಇದು ಈ ಸಲ ಬೆಳೆ ಸಾಲ ಪಡೆಯಲು ಫ್ರಟ್ಸ್ ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿದೆ. ಫ್ರಟ್ಸ್ (FID)ಎಂದರೆ ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯೂನಿಫೈಡ್ ಬೆನಿಫಿಷಿಯರಿ ಇಸ್ಲಾರ್ಮಶನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್. ಇದರ ಮೂಲಕ ಕೃಷಿಕರು ಹಲವು ಪ್ರಯೋಜನ ಪಡೆಯಬಹುದಾಗಿದೆ ರಾಜ್ಯ ಸರ್ಕಾರದ ಆದೇಶದಂತೆ ಈ ವೆಬ್ ಪೋರ್ಟಲ್ ನಲ್ಲಿ ಎಲ್ಲ ತರಹದ ವಾಣಿಜ್ಯ ಬೆಳೆ ಆಹಾರ ಬೆಳೆಯನ್ನು ಒಳಗೊಂಡ ಎಲ್ಲ ವರ್ಗದ ಕೃಷಿಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯ.

ನೋಂದಣಿ ಹೇಗೆ?

ಸಮೀಪದ ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಸಂಗೋಪನ ಇಲಾಖೆ,ಕಂದಾಯ ಇಲಾಖೆಗಳ ಪೈಕಿ ಯಾವುದಾದರೂ ಒಂದು ಇಲಾಖೆಗೆ ಭೇಟಿ ನೀಡಿ ಕೃಷಿಕನ RTC ಉತಾರ, ಆಧಾರ್ ಕಾರ್ಡ, ರಾಷ್ಟ್ರೀಕೃತ ಬ್ಯಾಂಕ್‌ನ ಪಾಸ್ ಬುಕ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಫೋಟೋ,ಮೊಬೈಲ್ ನಂಬರ್ ನೀಡಿದರೆ 24 ಗಂಟೆಯೊಳಗೆ ನಿಮ್ಮ ಹೆಸರು ಪೋರ್ಟಲ್ ನಲ್ಲಿ ಸೇರ್ಪಡೆಗೊಳ್ಳುತ್ತದೆ.

ಏಕೆ ನೋಂದಾಯಿಸಬೇಕು?

ಸರ್ಕಾರದ ಆದೇಶದಂತೆ ಈ ಪೋರ್ಟಲ್ಲಿ ಕೃಷಿಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳದೆ ಇದ್ದರೆ ಆತನಿಗೆ ಬೆಳೆ ಸಾಲ, ಬೆಳೆ ವಿಮೆ,ಕೃಷಿಕನ ಮಕ್ಕಳಿಗೆ ಸಿಗುವ ವಿದ್ಯಾನಿಧಿ, ಕೃಷಿಗೆ ಪೂರಕವಾದ ಇತರೆ ಸೌಲಭ್ಯಗಳು ದೊರೆಯುವುದಿಲ್ಲ. ಈಗಾಗಲೇ ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ರೈತ ಶಕ್ತಿ ಯೋಜನೆ ಅಡಿ ಪ್ರತಿಯೊಬ್ಬ ಕೃಷಿಕನಿಗೆ ಒಂದು ಎಕರೆಗೆ 250 ನಂತೆ ಗರಿಷ್ಠ 5 ಎಕರೆಗೆ 1,250 ಇಂಧನ ವೆಚ್ಚ ಕೃಷಿಕನ ಖಾತೆಗೆ ನೇರ ಜಮೆಗೊಳ್ಳಲಿದೆ. ಎಲ್ಲಾ ದಾಖಲೆಗಳಿದ್ದರೂ ಫ್ರಟ್ಸ್ ಪೋರ್ಟಲ್ ನಲ್ಲಿ ಹೆಸರು ನಮೂದಿಸದಿದ್ದರೆ ಸರ್ಕಾರದಿಂದ ಪಡೆಯುವ ಎಲ್ಲಾ ಸೌಲಭ್ಯಗಳಿಂದ ವಂಚಿತನಾಗುತ್ತಾನೆ.ಅದಕ್ಕಾಗಿ ಕೂಡಲೇ ಕ್ರೂಟ್ಸ್ ಪೋರ್ಟಲ್ ನಲ್ಲಿ ನಿಮ್ಮ ಹೆಸರು ನೊಂದಾಯಿಸಿಕೊಂಡು,ನಿಮ್ಮ FID ಪಡೆದುಕೊಳ್ಳಿ ಹಾಗೂ ಅದನ್ನು ಸರ್ಕಾರದ ಸೌಲತ್ತು ಪಡೆಯಲು ಬಳಸಿ.

Leave a Reply

Your email address will not be published. Required fields are marked *