ಇನ್ನೂ ಜಮಾ ಆಗಬೇಕಾಗಿದ್ದ ರೈತರ ಬೆಳೆ ವಿಮೆ ಜಮಾ ಮಾಡಲಾಗುವುದು…! ನಿಮ್ಮ ಸ್ಟೇಟಸ್ ಈಗಲೇ ಚೆಕ್ ಮಾಡಿಕೊಳ್ಳಿ…!

ರೈತರ ಬೆಳೆ ವಿಮೆ ಪರಿಹಾರ ಹಣ ಪೂರ್ಣ ಪ್ರಮಾಣದಲ್ಲಿ ಪಾವತಿಯಾಗುವಂತೆ ಎಲ್ಲಾ ಜಿಲ್ಲೆಯಲ್ಲಿಯೂ ಕೃಷಿ ಇಲಾಖೆ ಕಟ್ಟು ನಿಟ್ಟಿನ ಕ್ರಮ ವಹಿಸಬೇಕು ಎಂದು ಸರ್ಕಾರ ಸೂಚಿಸಿದೆ.

WhatsApp Group Join Now
Telegram Group Join Now

ಕಳೆದ 2019-20 ರಿಂದ 3 ವರ್ಷಗಳಲ್ಲಿ ರಾಜ್ಯದ 10,053 ರೈತರಿಗೆ 9.68 ಕೋಟಿ ರೂ ಬೆಳೆ ವಿಮೆ ಪಾವತಿ ಆಗುವುದು ಇನ್ನೂ ಬಾಕಿ ಇದೆ. ಆಧಾರ್ ಲಿಂಕ್ ಅಥವಾ ತಾಂತ್ರಿಕ ಕಾರಣಕ್ಕಾಗಿ ಈ ಹಣ ರೈತರ ಅಕೌಂಟ್‌ಗಳಿಗೆ ಆನ್ ಲೈನ್‌ನಲ್ಲಿ ಪಾವತಿ ಆಗುತ್ತಿಲ್ಲ ಎನ್ನುವ ವಿವರಣೆ ನೀಡಲಾಗಿದೆ.

ಆದರೆ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ರೈತರು ಪ್ರೀಮಿಯಂ ಕಟ್ಟಿ ವಿಮೆ ವ್ಯಾಪ್ತಿಗೆ ಒಳಪಟ್ಟ ಮೇಲೆ ಅವರಿಗೆ ಆ ಸೌಲಭ್ಯ ಲಭ್ಯವಾಗುವಂತೆ ಮಾಡಬೇಕಾದ್ದು ನಮ್ಮ ಕರ್ತವ್ಯ. ವಿಮೆ ಮಾಡಿಸಿದವರಿಗೆ ಬೆಳೆ ನಷ್ಟವಾದಾಗಲೂ ನಾವು ವಿಮೆ ಪರಿಹಾರ ಹಣವನ್ನು ಸರಿಯಾಗಿ ಕೊಡಿಸದೆ ಇದ್ದರೆ ಯಾವ ನ್ಯಾಯ? ಆದ್ದರಿಂದ ಈ ಬಗ್ಗೆ ಮೀಟಿಂಗ್‌ಗಳಲ್ಲಿ ಸಬೂಬು ಹೇಳದೆ ಎಲ್ಲೆಲ್ಲಿ ಸಮಸ್ಯೆಯಾಗಿದೆ ಎನ್ನುವುದನ್ನು ಪ್ರತಿ ತಾಲೂಕುವಾರು ಪತ್ತೆ ಮಾಡಿ ಖುದ್ದು ರೈತರನ್ನು ಭೇಟಿ ಮಾಡಿ ಸರಿಪಡಿಸುವಂತೆ ಸೂಚಿಸಲಾಗಿದೆ.

ಪ್ರತಿ ಲ್ಲೆಯಲ್ಲಿಯೂ ಬ್ಯಾಂಕ್ ಮತ್ತು ವಿಮಾ ಕಂಪನಿಗಳ ಜೊತೆಗೆ

ಜಂಟಿ ಸಭೆ ನಡೆಸಿ, ಲೋಪ ದೋಷಗಳನ್ನು ಸರಿಪಡಿಸಿ, ರೈತರಿಗೆ ಸೇವೆ ನೀಡಬೇಕು ಎಂದು ತಾಕೀತು ಮಾಡಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಸಲ್ ಭೀಮಾ ಯೋಜನೆಯ ಪ್ರಯೋಜನ ಪ್ರತಿ ರೈತರಿಗೆ ತಲುಪಬೇಕು. ಅದಕ್ಕಾಗಿ ಜಾಗೃತಿ ಅಭಿಯಾನವನ್ನು ಗ್ರಾಪಂ ಮಟ್ಟದಲ್ಲಿ ನಡೆಸಬೇಕು ಎಂದು ತಿಳಿಸಲಾಗಿದೆ.

ಆಧಾರ್ ಜೋಡಣೆಯಲ್ಲಿನ ಲೋಪವೂ ಸೇರಿದಂತೆ ಇನ್ನಿತರ ತಾಂತ್ರಿಕ ದೋಷಗಳಿಂದಾಗಿ ಕಳೆದ 3 ವರ್ಷದಿಂದಲೂ ರಾಜ್ಯದ 10,053 ರೈತರಿಗೆ 9.68 ಕೋಟಿ ರೂ. ಬೆಳೆ ವಿಮೆ ಪರಿಹಾರದ ಮೊತ್ತವೇ ಜಮೆಯಾಗಿಲ್ಲ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ರೈತರಿಗೆ ಹಿಂದಿನ ಸಾಲುಗಳಲ್ಲಿ ಬಾಕಿ ಇರುವ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ವೈಫಲ್ಯಗಳದ್ದೇ ಮೇಲುಗೈಯಾಗಿರುವುದು ಇದೀಗ ಬಹಿರಂಗವಾಗಿದೆ.

ಬಾಕಿ ಇರುವ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ಸಂಬಂಧ ಕೃಷಿ ಇಲಾಖೆಯ ಆಯುಕ್ತರು ಮತ್ತು ಕಂದಾಯ ಇಲಾಖೆ ಆಯುಕ್ತರು, ಬ್ಯಾಂಕ್, ವಿಮೆ ಕಂಪೆನಿಗಳ ನಡುವಿನ ಸಮನ್ವಯತೆಯಲ್ಲಿ ಕೊರತೆಯೇ ಇದಕ್ಕೆ ಕಾರಣ ಎನ್ನಲಾಗಿದೆ.

ಬೆಳೆ ವಿಮೆ ಪರಿಹಾರ ಮೊತ್ತ ಪಾವತಿ ಸಂಬಂಧ ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್ ಅವರು 2023ರ ಸೆ.22ರಂದು ಕಂದಾಯ ಇಲಾಖೆಯ ಆಯುಕ್ತರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಕಂದಾಯ ಇಲಾಖೆಯಡಿ ಬರುವ ಗ್ರಾಮ್ ಒನ್ ಸೆಂಟರ್, ಬಾಪೂಜಿ ಸೇವಾ ಕೇಂದ್ರಗಳು ಇತ್ಯಾದಿಗಳ ಸೇವೆಗಳನ್ನು ಬಳಸಿಕೊಂಡು ಬಾಕಿ ಇರುವ ಪ್ರತೀ ರೈತರಿಗೆ ವಿಮೆ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಬೇಕಿದ್ದ ಕಂದಾಯ ಇಲಾಖೆಯ ಬೇಜವಾಬ್ದಾರಿ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಎಲ್ಲಾ ಜಿಲ್ಲೆಗಳ ಬ್ಯಾಂಕ್ ಹಾಗೂ ವಿಮಾ ಸಂಸ್ಥೆಗಳೊಂದಿಗೆ ಸತತವಾಗಿ ಪ್ರಯತ್ನಿಸಿ, ಬಾಕಿ ಮೊತ್ತ ಪಾವತಿಸಲು ಕ್ರಮವಹಿಸಲಾಗಿದೆ. ಆದಾಗ್ಯೂ 2019-20ರಿಂದ 2022ರ ಮುಂಗಾರು ಹಂಗಾಮಿನವರೆಗೆ 10.053 ರೈತರಿಗೆ 9.68 ಕೋಟಿ ರೂ. ಮೊತ್ತದ ಬೆಳೆವಿಮೆ ಪರಿಹಾರ ಪಾವತಿಸಲು ಬಾಕಿ ಇದೆ ಎಂದು ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್ ಅವರು ಬರೆ ಪತ್ರದಲ್ಲಿ ವಿವರಿಸಲಾಗಿದೆ.

2019-20ನೇ ಸಾಲಿನಿಂದ ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸುವ ಪ್ರಕ್ರಿಯೆಯನ್ನು ರಾಷ್ಟ್ರದಲ್ಲೇ ಪ್ರಥಮ ಬಾರಿಗೆ ಸಂರಕ್ಷಣೆ ಪೋರ್ಟಲ್ ತಂತ್ರಾಂಶ ಅನುಷ್ಠಾನಗೊಳಿಸಲಾಗಿತ್ತು. ರೈತರ ಖಾತೆಗೆ ಆಧಾರ್ ಆಧಾರಿತ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದ ಕಾರಣವೂ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ 2019-20ನೇ ಸಾಲಿನಿಂದ ರಾಜ್ಯದಲ್ಲಿ ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತವು ರೈತರ ಬ್ಯಾಂಕ್ ಖಾತೆಗೆ ಜಮೆ ಯಾಗದೇ ಬಾಕಿ ಇದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜ ನೆಯು ಇಳುವರಿ ಹಾಗೂ ಕ್ಷೇತ್ರ ಆಧಾರಿತ ಯೋಜನೆಯಾಗಿದೆ.

ಅರ್ಜಿ ಸಲ್ಲಿಸುವುದರಿಂದ ಬೆಳೆ ಕಟಾವು ಪ್ರಯೋಗ ಹಾಗೂ ವಿಮಾ ಪರಿಹಾರ ಮೊತ್ತವನ್ನು ಅರ್ಹ ರೈತರ ಖಾತೆಗೆ ಜಮೆಯಾಗುವವರೆಗೆ ಪ್ರತಿಯೊಂದನ್ನೂ ವೈಜ್ಞಾನಿಕವಾಗಿ ಸಂರಕ್ಷಣೆ ಪೋರ್ಟಲ್ ಮೂಲಕ ಮಾಡಲಾಗುತ್ತಿದೆ ಎಂದು ಸರಕಾರವು ಹೆಮ್ಮೆಯಿಂದ ಬೀಗಿತ್ತು.

ಬೆಳೆ ವಿಮೆ ವಂಚನೆಗಳು ನಿರಂತರವಾಗಿ ವರದಿಯಾಗುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಇದೆ. ರಾಜ್ಯದ ಕೆಲವು ಜಿಲ್ಲೆಗಳ ರೈತರು ಇಳುವರಿ ಮೌಲ್ಯಮಾಪನವನ್ನು ನಿರ್ವಹಿಸುವ ಅಧಿಕಾರಿಗಳಿಗೆ ವಿಮೆ ಮೊತ್ತವನ್ನು ಪಾವತಿಸುತ್ತಾರೆ.

ಕೃಷಿ ವೆಚ್ಚವನ್ನು ಪೂರೈಸಲು ಮತ್ತು ದುಡಿಯುವ ಬಂಡವಾಳಕ್ಕಾಗಿ ರೈತರು ಸಾಲವನ್ನು ಪಡೆಯುತ್ತಾರೆ. ಅಲ್ಲದೆ ಬರ, ಪ್ರವಾಹ ಅಥವಾ ಇತ್ತೀಚೆಗೆ ಕಂಡುಬಂದಂತೆ ಅಕಾಲಿಕ ಮಳೆ ಬೆಳೆ ಹಾನಿಯಿಂದಾಗಿ ನಷ್ಟಕ್ಕೀಡಾಗುವ ರೈತರೂ ಸಾಲಕ್ಕೆ ಮೊರೆ ಹೋಗುತ್ತಾರೆ.

ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.

Leave a Reply

Your email address will not be published. Required fields are marked *