ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಜೋರು…!
ಡಿಸೆಂಬರ್ 6ರವರೆಗೂ ಮಳೆರಾಯನ ಅಬ್ಬರ ಇರಲಿದೆ…!
ಕರುನಾಡ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ಮುಂಗಾರು ಸಮಯದಲ್ಲಿ ಮಳೆಯ ಕೊರತೆ ಉಂಟಾಗಿ ಬರಗಾಲ ಘೋಷಣೆ ಮಾಡಲಾಗಿದ್ದು ಇದೀಗ ಮಳೆರಾಯನ ಆರ್ಭಟ ಶುರುವಾಗಿದೆ ಹಿಂಗಾರಿನಲ್ಲಿ ಸಮಯಕ್ಕೆ ಸರಿಯಾಗಿ ಮಳೆರಾಯನು ಬರುತ್ತಿದ್ದು ಇದೀಗ ಮತ್ತೆ ಡಿಸೆಂಬರ್ 6ವರೆಗೂ ಮಳೆರಾಯನ ಆರ್ಭಟ ಜೋರಾಗಿದೆ..!
ಹಲೋ ಸ್ಥಳಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು ಯಾವ ಸ್ಥಳದಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗೆ ಇದರ ಸಂಪೂರ್ಣ ವಿವರಣೆ ಇಲ್ಲಿದೆ ನೋಡಿ…
ಬಾಂಗ್ಲಾದೇಶದ ಮೇಲೆ ಮಿಧಿಲಿ ಚಂಡಮಾರುತದ ವಿನಾಶಕಾರಿ ಭೂಕುಸಿತದ ಕೇವಲ ಒಂದು ವಾರದ ನಂತರ ಇದೀಗ “ಮೈಚಾಂಗ್” ಚಂಡಮಾರುತದ ಪ್ರಭಾವ ಬೀರುತ್ತಿದೆ. ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶದ ನಡುವೆ ಒಡಿಶಾ ಸರ್ಕಾರವು ರಾಜ್ಯದ ಏಳು ಕರಾವಳಿ ಜಿಲ್ಲೆಗಳನ್ನು ಅಲರ್ಟ್‌ನಲ್ಲಿ ಇರಿಸಿದೆ. ಇದು ಡಿಸೆಂಬರ್ 2ರ ವೇಳೆಗೆ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಸೋರ್, ಭದ್ರಕ್, ಕೇಂದ್ರಪಾರಾ, ಜಗತ್‌ಸಿಂಗ್‌ಪುರ, ಪುರಿ, ಖುರ್ದಾ ಮತ್ತು ಗಂಜಾಂ ಜಿಲ್ಲೆಗಳ ಅಧಿಕಾರಿಗಳಿಗೆ ಪತ್ರ ಬರೆದಿರುವ ವಿಶೇಷ ಪರಿಹಾರ ಆಯುಕ್ತ ಸತ್ಯಬ್ರತ ಸಾಹೂ, ದಕ್ಷಿಣ ಅಂಡಮಾನ್ ಸಮುದ್ರದ ಮೇಲಿನ ಕಡಿಮೆ ಒತ್ತಡದ ಪ್ರದೇಶದಲ್ಲಿ ಸೈಕ್ಲೋನ್ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಇನ್ನು ಡಿಸೆಂಬರ್ 1ರ ಬೆಳಗ್ಗೆಯಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು ಮತ್ತು ಸಮುದ್ರಕ್ಕೆ ಹೋದವರು ಆ ದಿನಾಂಕದೊಳಗೆ ಮರಳಬೇಕು ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ. ಡಿಸೆಂಬರ್ 3ರಂದು ಕೊರಾಪುಟ್, ರಾಯಗಡ, ಗಜಪತಿ, ಗಂಜಾಂ, ಪುರಿ ಮತ್ತು ಜಗತ್‌ಸಿಂಗ್‌ಪುರದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆಯೂ ಇದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ 1ರ ಬೆಳಗ್ಗೆಯಿಂದ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಗಂಟೆಗೆ 40-50ನಿಂದ 60 ಕಿ.ಮೀಟರ್‌ರೆಗೂ ಗಾಳಿಯ ವೇಗವನ್ನು ನಿರೀಕ್ಷಿಸಲಾಗಿದೆ. ಡಿಸೆಂಬರ್ 2 ರಂದು ಬೆಳಿಗ್ಗೆ 60-70ರಿಂದ 80 ಕಿ.ಮೀಟರ್‌ವರೆಗೆ ಗಾಳಿಯ ವೇಗ ಇರುವ ಸಾಧ್ಯತೆಯಿದೆ. ಮಧ್ಯ ಬಂಗಾಳ ಕೊಲ್ಲಿಯಲ್ಲಿ ಡಿಸೆಂಬರ್ 1 ರಂದು ಗಂಟೆಗೆ 40-50 ಕಿ.ಮೀ. ವೇಗದಿಂದ 60 ಕಿ.ಮೀ. ವೇಗದಲ್ಲಿ, ಡಿಸೆಂಬರ್ 2ರಂದು ಗಂಟೆಗೆ 50-60 ಕಿ.ಮೀಟರ್‌ನಿಂದ 70 ಕಿ.ಮೀಟರ್‌ವರೆಗೆ ಗಾಳಿ ಬೀಸುವ ಸಾಧ್ಯತೆಯಿದೆ.
ನವೆಂಬರ್ 29-30 ರ ಅವಧಿಯಲ್ಲಿ ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್‌ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 30ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇದೇ ರೀತಿ ವಾತಾವರಣ ಇರಲಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಯಲು ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಭ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಇನ್ನು ಮುಂದಿನ 5 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್ ಮತ್ತು ಕೇರಳ ಸೇರಿದಂತೆ ಇನ್ನು ಕೆಲವು ರಾಜ್ಯಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 29ರಿಂದ ಡಿಸೆಂಬರ್ 1 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ನವೆಂಬರ್ 30 ಮತ್ತು ಡಿಸೆಂಬರ್ 1 ರಂದು ಕೇರಳದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ತಿಳಿಸಿದೆ.