ಕರ್ನಾಟಕ ಜನತೆಗೆ ನಮಸ್ಕಾರಗಳು
ಪ್ರಸ್ತುತ ಈ ನಮ್ಮ ಲೇಖನದಲ್ಲಿ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದು ಇದೀಗ ನೋಡಿ ಸಂಪೂರ್ಣ ಮಾಹಿತಿ…!
ಕರ್ನಾಟಕ ರಾಜ್ಯ ಸರ್ಕಾರದ ರೇಷ್ಮೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು 10ನೇ ತರಗತಿ ಪಾಸ್ ಆಗಿದ್ದರೆ ಅರ್ಜಿ ಸಲ್ಲಿಸಬಹುದಾಗಿದೆ.
ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಅರ್ಜಿ ಸಲ್ಲಿಸಲು ಪವರ್ ನವಕಾಶವಿದು ಇದರ ಸಂಪೂರ್ಣ ಮಾಹಿತಿ ಈ ಕೆಳಗಿನತಿದೆ …ನೋಡಿ
ಬೆಂಗಳೂರಿನಲ್ಲಿರುವ ಕೇಂದ್ರ ರೇಷ್ಮೆ ನಿಗಮ (CSB) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. CSB ನಲ್ಲಿ ಖಾಲಿ ಇರುವ ಗ್ರೂಪ್ ಎ & ಬಿ ಹುದ್ದೆಗಳನ್ನು ನಿಯೋಜನೆ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 31-01-2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Qualification/ ಅರ್ಹತೆಗಳು:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಅನುಭವ ಹೊಂದಿರಬೇಕು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರನಾಗಿರಬೇಕು.
ವಯೋಮಿತಿ/ Age:
ಅಭ್ಯರ್ಥಿಗಳು ಗರಿಷ್ಟ ಅಂದರೇ 56 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ/ Processing Fees:
ಅರ್ಜಿ ಶುಲ್ಕಇರುವುದಿಲ್ಲ
ಆಯ್ಕೆ ವಿಧಾನ ಹೇಗಿರುತ್ತೆ/ Selection Procedure
ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ/ How to Apply –
ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿನಮೂನೆಯನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿ ಅದನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅವೆಲ್ಲವನ್ನು ಮುಚ್ಚಿದ ಲಕೋಟೆಯಲ್ಲಿಟ್ಟು ದಿನಾಂಕ 31-01-2024 ರ ಒಳಗಾಗಿ ತಲುಪುವಂತೆ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 16-12-2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 31-01-2024