ಕರ್ನಾಟಕದ ಹಲವಡೆ ಮಳೆರಾಯನ ಆಗಮನ…!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..!
ಪ್ರೀತಿಯ ಓಡುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಲೇಖನಗಳಲ್ಲಿ ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಹವಾಮಾನದ ಬಗ್ಗೆ ತಿಳಿಯೋಣ ಬನ್ನಿ..!
ರಾಜ್ಯದ ಹಲವು ಭಾಗಗಳಲ್ಲಿ ಮಳೆರಾಯನ ಸಾಧ್ಯತೆ..!
ಹೌದು ಸ್ನೇಹಿತರೆ, ಈಗಾಗಲೇ ನಿಮಗೆ ತಿಳಿದಿರುವಂತೆ ಈ ವರ್ಷ ಸ್ವಲ್ಪ ಮಳೆ ಕಡಿಮೆ ಪ್ರಮಾಣದಲ್ಲಿ ಆಗಿದ್ದು ಇದರಿಂದಾಗಿ ರೈತರಿಗೆ ಬಿಕ್ಕಟ್ಟು ಉಂಟಾಗಿದೆ..!
ಸರಿಯಾದ ಸಮಯದಲ್ಲಿ ಮಳೆ ಆಗದೆ ಇರುವುದಕ್ಕಾಗಿ ಬೆಳೆ ಹಾನಿಯಾಗಿದ್ದು ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ..!
ಇನ್ನು ಬೇಸಿಗೆ ಕಾಲಕ್ಕೆ ಒಂದು ತಿಂಗಳು ಬಾಕಿ ಇದ್ದರೂ ಸಹ ಈಗಲೇ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ನೀರಿನ ಕೊರತೆ ಉಂಟಾಗಿದೆ..!
ಇದೀಗ ದಕ್ಷಿಣ ಭಾಗದಲ್ಲಿ ಮಳೆರಾಯನ ಸಾಧ್ಯತೆ ಇದ್ದು ಇದರಿಂದಾಗಿ ರೈತರಿಗೆ ಸಹಾಯವಾಗಲಿದೆ..!
ಹಲವು ಭಾಗಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು ಮಳೆರಾಯನ ಆಗಮನಕ್ಕಾಗಿ ಕಾಯುತ್ತಿದ್ದಾರೆ..!
ಮಳೆ ಯಾವ ಪ್ರದೇಶದಲ್ಲಿ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..!
ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಆದರೆ ಗರಿಷ್ಠ ತಾಪಮಾನದಲ್ಲಿ ಯಾವುದೇ ಇಳಿಕೆ ಗೋಚರಿಸಿಲ್ಲ.
ಈ ನಡುವೆಯೇ ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ