ಸಮಸ್ತ ರೈತ ಬಾಂಧವರಿಗೆ ನಮಸ್ಕಾರಗಳು
ಕರ್ನಾಟಕದ ರೈತ ಬಾಂಧವರಿಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಈ ಬರ ಪರಿಹಾರ ಖಾತೆಗೆ ಜಮಾ ಆಗಿದ್ದು ಪ್ರತಿ ರೈತರ ಕಥೆಗಳು ಬರೋಬ್ಬರಿ ತಲಾ 16,000 ಹಣ ಜಮಾ ಮಾಡಲಾಗಿದೆ..
ಇಲ್ಲಿ ಮುಖ್ಯವಾಗಿ ತಿಳಿಸುವುದೇನೆಂದರೆ ಹಲವು ರೈತರ ಖಾತೆಗೆ ಇಲ್ಲಿಯವರೆಗೂ ಯಾವುದೇ ತರನಾದಂತಹ ಬರ ಪರಿಹಾರದ ಹಣ ಜಮಾ ಆಗಿಲ್ಲ
ಬರ ಪರಿಹಾರ ಜಮಾ ಆಗದೇ ಇರುವಂತಹ ರೈತರಿಗೆ ಸರ್ಕಾರವು ಸೂಚನೆಯನ್ನು ನೀಡಿದ್ದು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಖಾತೆಗೆ ಬರ ಪರಿಹಾರ ಯಾಕೆ ಜಮಾ ಆಗಿಲ್ಲ ಎಂಬುದನ್ನು ತಿಳಿದುಕೊಳ್ಳಿ ಎಂದು ಸರ್ಕಾರವು ಪ್ರತಿ ತಾಲೂಕಿನ ಸಹಾಯವಾಣಿ ಸಂಖ್ಯೆಯ ಲಿಸ್ಟ್ ಒಂದನ್ನು ಬಿಡುಗಡೆ ಮಾಡಿದೆ..
ಅಷ್ಟೇ ಅಲ್ಲದೆ ರೈತ ಬಾಂಧವರಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ, ದಯವಿಟ್ಟು ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಖಾತೆಗೆ ಬೆಳೆ ವಿಮೆ ಅಥವಾ ಬರ ಪರಿಹಾರ ಜಮಾ ಆಗದೇ ಇರಲು ಕಾರಣಗಳೇನು ತಿಳಿದುಕೊಂಡು ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ..
Bara parihara helpline number :
ಬರಗಾಲ ಪರಿಹಾರ ಹಣ ಯಾವ ರೈತರಿಗೆ ಜಮೆಯಾಗಿಲ್ಲವೋ ಅಂತಹ ರೈತರಿಗಾಗಿ ಸಹಾಯವಾಣಿ ನಂಬರ್ ಆರಂಭಿಸಲಾಗಿದೆ.
ಹೌದು, ಯಾವ ಯಾವ ರೈತರಿಗೆ ಬೆಳೆ ಹಾನಿ ಪರಿಹಾರ ಬಂದಿಲ್ಲವೋ ಆ ರೈತರು ಇಲ್ಲಿ ನೀಡಲಾದ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ವಿಚಾರಿಸಬಹುದು. ಹಾಗಾದರೆ ನಿಮಗೆ ಬರಗಾಲ ಪರಿಹಾರ ಹಣ ಏಕೆ ಜಮೆಯಾಗಿಲ್ಲ? ಬರಗಾಲ ಪರಿಹಾರ ಹಣ ಎಷ್ಟು ಜಮೆಯಾಗಲಿದೆ? ಯಾವ ತಾಲೂಕಿನ ರೈತರು ಯಾವ ನಂಬರಿಗೆ ಕರೆ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಳೆ ಹಾನಿ ಪರಿಹಾರದ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ನೀಡಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲು ಕ್ರಮಕೈಗೊಳ್ಳಲಾಗಿದೆ. ಈ ಮೂಲಕ ಸರಿಯಾದ ಮಾಹಿತಿಯನ್ನು ರೈತರಿಗೆ ತಲುಪಿಸಲು ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು,ಈ ಮೂಲಕ ರೈತರಿಗೆ ನೆರವಾಗಲು ಜಿಲ್ಲಾಡಳಿತ ಮುಂದಾಗಿದೆ.
2023ನೇ ಸಾಲಿನ ಮುಂಗಾರಿನ ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಪರಿಹಾರದ ಮೊದಲನೇ ಕಂತಾಗಿ 2000 ರೂಪಾಯಿ ಪಾವತಿಸಲಾಗಿದೆ.
Bara parihara helpline number ನಿಮಗೆಷ್ಟು ಬರ ಪರಿಹಾರ ಹಣ ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ
ನಿಮಗೆ ಬರ ಪರಿಹಾರ ಹಣ ಎಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://parihara.karnataka.gov.in/service92
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ ನೀವು Select Year / ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ Select Season / ಋತು ಆಯ್ಕೆ ಮಾಡಿಯಲ್ಲಿ ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Select Calamity ವಿಪತ್ತು ಆಯ್ಕೆ ಮಾಡಿಯಲ್ಲಿ ಬರ ಆಯ್ಕೆ ಮಾಡಬೇಕು. ನಂತರ Get Data / ಹುಡುಕು ಮೇಲೆ ಕ್ಲಿಕ್ ಮಾಡಬೇಕು.
ಅಲ್ಲಿ ನಿಮಗೆ ಆಧಾರ್ ಸಂಖ್ಯೆ, ರೈತರ ಗುರುತಿನ ಸಂಖ್ಯೆ, ಮೊಬೈಲ್ ಸಂಖ್ಯೆಹಾಗೂ ಸರ್ವೆ ನಂಬರ್ ಈ ನಾಲ್ಕರಲ್ಲಿ ಯಾವುದಾದರೊಂದು ಒಂದನ್ನು ಆಯ್ಕೆಮಾಡಿಕೊಳ್ಳಬೇಕು.
ಬರ ಪರಿಹಾರ ಜಮೆ ಮಾಡಲು ಯಾವ ದಾಖಲೆ ಬೇಕಿಲ್ಲ.ನಿಮ್ಮ ಸರ್ವೆ ನಂಬರ್ ಗೊತ್ತಿದ್ದರೆ.ಸಾಕು, ಸರ್ವೆ ನಂಬರ್ ನಮೂದಿಸಿ ಚೆಕ್ ಮಾಡಬಹುದು. ಹೌದು,ನೀವು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.ಇದಾದ ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು.
ನಂತರ ನಿಮ್ಮ ಊರು ಗ್ರಾಮ ಆಯ್ಕೆಮಾಡಿಕೊಳ್ಳಬೇಕು. ನಂತರ ನಿಮ್ಮ ಸರ್ವೆ ನಂಬರ್ ನಮೂದಿಸಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹಿಸ್ಸಾ ನಂಬರ್ ನಲ್ಲಿಯೂ ಸಹ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು.