ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ..!
Gnanagharjane
ಸಮಸ್ತ ಕರ್ನಾಟಕದ ಜನತೆಗೆ ಪ್ರಣಾಮಗಳು..!
ಪ್ರೀತಿಯ ಓದುಗರೆ ಪ್ರಸುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ರೈತ ಬಾಂಧವರಿಗಾಗಿ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಅಷ್ಟೇ ಅಲ್ಲದೆ ಹವಾಮಾನದ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಮಳೆರಾಯನ ಮುನ್ಸೂಚನೆ ಕಂಡುಬಂದಿದ್ದು ಯಾವ ಯಾವ ಸ್ಥಳಗಳಲ್ಲಿ ಮಳೆರಾಯನ ಆರ್ಭಟ ಜ್ವರಾಗಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..!
ಕಳೆದ ವರ್ಷದಲ್ಲಿ ಸರಿಯಾದ ಸಮಯದಲ್ಲಿ ಮಳೆ ಆಗದೆ ಇರುವುದಕ್ಕಾಗಿ ರೈತರ ಬೆಳೆ ಹಾನಿ ಉಂಟಾಗಿದ್ದು ಆದರೆ 2024 ಈ ವರ್ಷದಲ್ಲಿ ಮಳೆರಾಯನ ಮುನ್ಸೂಚನೆ ಈಗಾಗಲೇ ಶುರುವಾಗಿದೆ..
ಇಂದಿನಿಂದ ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಮಳೆಯಾಗಲಿದ್ದು ಇದರಿಂದಾಗಿ ರೈತರಿಗೆ ಸಂತಸ ಉಂಟಾಗಿದೆ.
ರಾಜ್ಯದ ದಕ್ಷಿಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಪ್ರಭಾವ ಬೀರಲಿದ್ದು ಈ ಕೆಳಕಂಡ ಜಿಲ್ಲೆಗಳಲ್ಲಿ ಮಳೆರಾಯನು ಅಬ್ಬರಿಸಲಿದ್ದಾನೆ..
ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ
ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಉಡುಪಿ ಚಿಕ್ಕಮಗಳೂರು ಕೊಡಗು ಹಾಗೆ ಇನ್ನಿತರ ಜಿಲ್ಲೆಗಳಲ್ಲಿ ಮಳೆರಾಯನ ಸದ್ದು ಮಾಡಲಿದ್ದಾನೆ..
ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಬಹುದು.
ಬಳ್ಳಾರಿ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲೂ ಸಾಧಾರಣ ಮಳೆ ಸುರಿಯುವ ಮುನ್ಸೂಚನೆಯಿದೆ.
ಮೇ 22ರಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಎರಡು ದಿನಗಳ ಕಾಲ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯ ಭಾರತ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮಾಡಿದ್ದು ದೆಹಲಿಯಲ್ಲಿ ಹವಾಮಾನವು ಹಾಲಹಾತಕರವಾಗಿರುತ್ತದೆ ಮತ್ತು ಉತ್ತಮ ಬಿಸಿಲಿನಿಂದ ಕೂಡಿರುತ್ತದೆ ಎಂದು ತಿಳಿಸಿದೆ. ದೆಹಲಿಯಲ್ಲಿ ಹಿಂದೂ ಕೂಡ ತಾಪಮಾನದಲ್ಲಿ ಏರಿಕೆ ಕಂಡು ಬರಬಹುದು.