Gnanagharjane
ಭಾರತೀಯ ವಾಯುಪಡೆಯಿಂದ 10ನೇ ತರಗತಿ ಪಾಸಾದವರಿಗೆ ಭರ್ಜರಿ ನೇಮಕಾತಿ : ಬೇಗನೆ ಅಪ್ಲೈ ಮಾಡಿ Indian Air force Recruitment
ಭಾರತ ದೇಶದ ರಕ್ಷಣೆ ಮಾಡುವುದರಲ್ಲಿ ಅತಿ ಮುಖ್ಯವಾಗಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವಂತಹ ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅಧಿಕೃತ ಅದುಸೂಚನೆ ಹೊರಡಿಸಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಕರ್ನಾಟಕ ರಾಜ್ಯ ಸರ್ಕಾರಿ ಆಗೋ ಕೇಂದ್ರ ಸರ್ಕಾರ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಹಾಗೂ ಕೇಂದ್ರ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತ ಅತಿ ಮುಖ್ಯ ಮಾಹಿತಿಗಳನ್ನು ದಿನನಿತ್ಯ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ಭಾರತೀಯ ವಾಯುಪಡೆಯಲ್ಲಿ 300 ಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಭಾರತದಾದ್ಯಂತ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನೇಮಕಾತಿಯ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ನೀಡಲಾಗಿದೆ.
ಭಾರತೀಯ ವಾಯುಪಡೆ ನೇಮಕಾತಿಯ ಪ್ರಮುಖ ಸಂಕ್ಷಿಪ್ತ ಮಾಹಿತಿ:
ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ : ಭಾರತೀಯ ವಾಯುಪಡೆ
ಒಟ್ಟು ಖಾಲಿ ಹುದ್ದೆಗಳ ನೇಮಕಾತಿ ಸಂಖ್ಯೆ : 304 ಹುದ್ದೆಗಳು
ಉದ್ಯೋಗ ಸ್ಥಳ : All India
ಅರ್ಜಿ ಸಲ್ಲಿಸುವುದು : ಆನ್ಲೈನ್ ಮೂಲಕ
ಭಾರತೀಯ ವಾಯುಪಡೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ 304 ಹುದ್ದೆಗಳ ನೇಮಕಾತಿ ಹಾಗೂ ಯಾವ ಯಾವ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಎಂಬ ಮಾಹಿತಿಯನ್ನು ಹಾಗೂ ಹುದ್ದೆಗಳ ಸಂಖ್ಯೆಯನ್ನು ಈ ಕೆಳಗಿನಂತೆ ನೀಡಲಾಗಿದೆ.
- ಫ್ಲೈಯಿಂಗ್ ಬ್ರಾಂಚ್ – 29 ಹುದ್ದೆಗಳು
- ಗ್ರೌಂಡ್ ಡ್ಯೂಟಿ ತಾಂತ್ರಿಕ – 156 ಹುದ್ದೆಗಳು
- ಗ್ರೌಂಡ್ ಡ್ಯೂಟಿ ತಾಂತ್ರಿಕೇತರ – 119 ಹುದ್ದೆಗಳು
ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಫ್ಲೈಯಿಂಗ್ ಬ್ರಾಂಚ್, ಗ್ರೌಂಡ್ ಡ್ಯೂಟಿ ತಾಂತ್ರಿಕ ಹುದ್ದೆಗಳು ಹಾಗೂ ಗ್ರೌಂಡ್ ಡ್ಯೂಟಿ ತಾಂತ್ರಿಕೇತರ ಹುದ್ದೆಗಳನ್ನು ಸೇರಿ ಒಟ್ಟು 304 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – ಭಾರತೀಯ ವಾಯುಪಡೆಯಲ್ಲಿ ನಡೆಯುತ್ತಿರುವಂತಹ ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಯಾವುದಾದರೂ ಒಂದು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿಯಲ್ಲಿ ಶೇಕಡ 50ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರುವುದು ಕಡ್ಡಾಯವಾಗಿದೆ.
ವಯೋಮಿತಿ ಅರ್ಹತೆಗಳು – ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹೊಂದಿರಬೇಕು ಹಾಗೂ ಗರಿಷ್ಟ 26 ವರ್ಷದ ಒಳಗಿರಬೇಕು. ನೇಮಕಾತಿಯಲ್ಲಿ ಮೀಸಲಾತಿ ಬಯಸುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ವಯೋ ಸಡಿಲಿಕೆ ಅನ್ವಯವಾಗಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. Salary : ಈ ಒಂದು ನೇಮಕಾತಿಯಲ್ಲಿ ಅಂತಿಮವಾಗಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 56,100 ರೂಪಾಯಿಯಿಂದ 1,77,500 ರೂಪಾಯಿಯವರಿಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
Application Fee – ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 500 ರೂಪಾಯಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು –
- ನೇಮಕಾತಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ : 30.05.2024
- ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28.06.2024 ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಳಗಿನ ಲಿಂಕ್ ಗೆ ಭೇಟಿ ನೀಡಿ ಅಂದರೆ ಭಾರತೀಯ ವಾಯುಪಡೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸರಿಯಾದ ಮಾಹಿತಿಯನ್ನು ಭರ್ತಿ ಮಾಡುವುದರ ಮುಖಾಂತರ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ
ಅರ್ಜಿ ಲಿಂಕ್ : https://afcat.cdac.in/AFCAT/