KPSC ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ : ಅರ್ಜಿ ಸಲ್ಲಿಸಲು ಜೂನ್ ಹತ್ತರ ಗಡುವು
ಕರ್ನಾಟಕ ಸರ್ಕಾರದ ಉದ್ಯೋಗಗಳ ನಿರೀಕ್ಷೆಯಲ್ಲಿರುವಂತವರಿಗೆ ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಪದವಿ ಮಟ್ಟಕ್ಕಿಂತ ಕಡಿಮೆ ವಿದ್ಯಾರ್ಥಿಯನ್ನು ಹೊಂದಿರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆವನಿಸಲಾಗಿತ್ತು ಈ ಒಂದು ನೇಮಕಾತಿಗೆ ಜೂನ್ 10ರ ಗಡುವ ನೀಡಲಾಗಿದೆ.
ಹಾಗಿದ್ದರೆ ಬನ್ನಿ ಕರ್ನಾಟಕ ಲೋಕಸೇವಾ ಆಯೋಗದಿಂದ ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದಾರೆ ಮತ್ತು ನೇಮಕಾತಿಯ ಸಂಪೂರ್ಣ ವಿವರ ವೇನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ತಿಳಿದುಕೊಳ್ಳೋಣ ಹಾಗೂ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಕೂಡ ತಿಳಿದುಕೊಳ್ಳೋಣ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಬಂಧುಗಳೇ ನಮ್ಮ ಈ ಜಾಲತಾಣದಲ್ಲಿ ನಾವು ದಿನನಿತ್ಯ ಕರ್ನಾಟಕ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಮಾಹಿತಿಗಳನ್ನು ಹಾಗೂ ಪ್ರಮುಖ ಮಾಹಿತಿಗಳನ್ನು ನೀಡುತ್ತಿದ್ದು ಅದೇ ರೀತಿ ಯೋಜನೆಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳು ಕೇಂದ್ರ ಸರ್ಕಾರ ಉದ್ಯೋಗಗಳಿಗೆ ಸಂಬಂಧಿಸಿದಂತಹ ಪ್ರಮುಖ ಮಾಹಿತಿಗಳನ್ನು ಕೂಡ ನೀಡುತ್ತಿದ್ದೇವೆ.
ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ಲೋಕಸೇವಾ ಆಯೋಗವು ಅಂದರೆ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಗ್ರೂಪ್ ಸಿ ಹುದ್ದೆಗಳ ನೇಮಕಾತಿಯ ಸಂಪೂರ್ಣ ವಿವರವನ್ನು ತಿಳಿಸಲಿದ್ದೇವೆ. ಕರ್ನಾಟಕ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವಂತಹ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್, ಕರ್ನಾಟಕ ರಾಜ್ಯದ ಪ್ರಸ್ತುತ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಗ್ರಂಥ ಪಾಲಕರ 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಒಂದು ನೇಮಕಾತಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿದ್ದು ಹೊಸ ಬದಲಾವಣೆಯ ಪ್ರಕಾರ ಈ ಒಂದು ನೇಮಕಾತಿಗೆ ಪ್ರಸ್ತುತ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಗ್ರಂಥ ಪಾಲಕರ 21 ಹುದ್ದೆಗಳಿಗೆ ವಿದ್ಯಾರ್ಹತೆಗೆ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿದೆ.
ಮೊದಲಿನ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನದಲ್ಲಿ ಡಿಪ್ಲೋಮೋ ಮುಗಿಸಿರಬೇಕಾಗಿತ್ತು, ಮತ್ತು ಇದರೊಂದಿಗೆ ಗ್ರಂಥಾಲಯ ವಿಜ್ಞಾನ ಹಾಗೂ ಮಾಹಿತಿ ತಂತ್ರಜ್ಞಾನ ಡಿಪ್ಲೋಮಾ ಹಾಗೂ ಅರ್ಹತೆ ನೀಡಲಾಗಿತ್ತು.
ಆದರೆ ಬಿಡುಗಡೆಯಾಗಿರುವ ಹೊಸ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಗ್ರಂಥಪಾಲಕರ ಹದಿಮೂರು ಹುದ್ದೆಗಳಿಗೆ ಗ್ರಂಥಾಲಯ ವಿಜ್ಞಾನ ಹಾಗೂ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನದಲ್ಲಿ ಪದವಿ ಬೇಕು ಎಂದು ತಿಳಿಸಲಾಗಿದೆ ಆದರೆ ಇದೇ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ದರರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನಿಂದ ಆದಂತಹ ಈ ಹಲವು ಬದಲಾವಣೆಗಳಿಂದಾಗಿ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 10ನೇ ತಾರೀಖಿನವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈಗಲೇ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಸಿಗುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿಕೊಂಡು ನಿಗದಿಪಡಿಸಲು ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ಜೂನ್ 10 ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಿ.