ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಭರ್ಜರಿ 35,000 ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಕೊನೆಯ ಅವಕಾಶPrize Money Scholarship..! Apply Now..

ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಭರ್ಜರಿ 35,000 ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಕೊನೆಯ ಅವಕಾಶ
Prize Money Scholarship

WhatsApp Group Join Now
Telegram Group Join Now

ಪ್ರತಿಯೊಬ್ಬ ವಿದ್ಯಾರ್ಥಿಗೆ ಅಥವಾ ಬಡ ವಿದ್ಯಾರ್ಥಿಗೆ ತನ್ನ ಶಿಕ್ಷಣವನ್ನು ಮುಂದುವರಿಸಲು ವಿದ್ಯಾರ್ಥಿ ವೇತನವು ಅತಿ ಮುಖ್ಯ ಪಾತ್ರ ವಹಿಸುತ್ತದೆ ಎಂದರೆ ತಪ್ಪಾಗಲಾರದು.

ಬಡ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಕರ್ನಾಟಕ ಸರ್ಕಾರವು ಹಾಗೂ ಕೇಂದ್ರ ಸರ್ಕಾರವು ವಿದ್ಯಾರ್ಥಿ ವೇತನವನ್ನು ನೀಡುವುದರ ಮುಖಾಂತರ ಆರ್ಥಿಕ ಭದ್ರತೆಯನ್ನು ಒದಗಿಸುತ್ತಾ ಬಂದಿದೆ ಈ ಒಂದು ನಿಟ್ಟಿನಲ್ಲಿ ಇದೀಗ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ 35,000 ವರೆಗಿನ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರದ ಪ್ರೈಸ್ ಮನಿ ಸ್ಕಾಲರ್ಶಿಪ್ prize money scholarship :

ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಈ ಒಂದು ವಿದ್ಯಾರ್ಥಿ ವೇತನವನ್ನು ಅರ್ಹ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Scholarship Scheme 2024For Students
More Information Click Here
scholarship karnatak scheme

ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಹಿಡಿದು ಪದವಿ ಮುಗಿಸಿರುವಂತಹ ವಿದ್ಯಾರ್ಥಿಗಳಿಗೆ ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಗಳಿರುತ್ತವೆ.

ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾಗುವ ಸಂಪೂರ್ಣ ಅರ್ಹತೆಗಳು :

ಕರ್ನಾಟಕ ಸರ್ಕಾರದ ವಿದ್ಯಾರ್ಥಿ ವೇತನದ ನಿಯಮಗಳ ಪ್ರಕಾರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅಥವಾ ಪ್ರೈಸ್ ಮನಿ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿದಂಥವರಾಗಿರಬೇಕು.

ಇದರ ಜೊತೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರೆ ಮಾತ್ರ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಹರಿರುತ್ತಾರೆ. ಅದೇ ರೀತಿ ಪ್ರಮುಖವಾಗಿ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು :

ವಿದ್ಯಾರ್ಥಿಯ ಆಧಾರ್ ಕಾರ್ಡ್
ವಿದ್ಯಾರ್ಥಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರ
10ನೇ ತರಗತಿಯ ಅಂಕಪಟ್ಟಿ
ವಿದ್ಯಾರ್ಥಿಯ ಭಾವಚಿತ್ರ
ಬ್ಯಾಂಕ್ ಖಾತೆಯ ವಿವರ
ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್

ಈ ದಾಖಲಾತಿಗಳನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಮತ್ತು ಅರ್ಜಿ ಸಲ್ಲಿಸಬೇಕಾಗಿರುವ ರಾಜ್ಯಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಹರಿರುವ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿ ವೇತನದ ಮೊತ್ತ :

ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಡಿಪ್ಲೋಮಾ ಮೇಲೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20000 ವಿದ್ಯಾರ್ಥಿವೇತನ

ಪದವಿ ಮೇಲೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 25,000 ವಿದ್ಯಾರ್ಥಿ ವೇತನ

ಸ್ನಾತಕೋತ್ತರ ಪದವಿಯ ಮೇಲೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 30000

ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 35,000 ವಿದ್ಯಾರ್ಥಿ ವೇತನ.

ಅರ್ಜಿ ಸಲ್ಲಿಸುವುದು ಹೇಗೆ ಮಾಹಿತಿಯನ್ನು ತಿಳಿದುಕೊಳ್ಳೋಣ :

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸಲು ಮತ್ತು ಅರ್ಹರಿರುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವಿದ್ಯಾರ್ಥಿ ವೇತನವನ್ನು ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ತಡ ಮಾಡದೆ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತೇವೆ.

Leave a Reply

Your email address will not be published. Required fields are marked *