ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಭರ್ಜರಿ 586 ಹುದ್ದೆಗಳ ನೇಮಕಾತಿ : ನೀವು ಕೂಡ ಬೇಗನೆ ಅಪ್ಲೈ ಮಾಡಿ
ಕರ್ನಾಟಕ ರಾಜ್ಯದಲ್ಲಿರುವ ಗ್ರಾಮೀಣ ಬ್ಯಾಂಕಿನಲ್ಲಿ ಭರ್ಜರಿ 586 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು ಈ ಒಂದು ನೇಮಕಾತಿಯಲ್ಲಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಸಲು ಇನ್ನೂ ಎರಡು ದಿನ ಮಾತ್ರ ಬಾಕಿ ಇದ್ದು ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ.
ಜ್ಞಾನ ಘರ್ಜನೆಯ ಜಾಲತಾಣಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು..
ನಮ್ಮ ಈಜಾಲ ತಾಣದಲ್ಲಿ ದಿನನಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಉದ್ಯೋಗ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ ಆಸಕ್ತರು ಬೇಗನೆ ಈ ಮಾಹಿತಿಯನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿ.
Karnataka Grameena Bank recruitment 586 vacancy :
ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ 586 ಹುದ್ದೆಗಳ ನೇಮಕಾತಿ
ಹೌದು ಸ್ನೇಹಿತರೆ ಕರ್ನಾಟಕ ಗ್ರಾಮೀಣ ಬ್ಯಾಂಕು ಹಾಗೂ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸೇರಿ ಒಟ್ಟು 586 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಬ್ಯಾಂಕುಗಳ ಪ್ರಕಾರ ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿರುತ್ತದೆ
ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳು – 386 ಹುದ್ದೆಗಳು
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳು – 200 ಹುದ್ದೆಗಳು ಯಾವ ಯಾವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳಬೇಕಾದರೆ, ಒಟ್ಟು 200 ಆಫೀಸ ಅಸಿಸ್ಟೆಂಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಹಾಗೂ 386 ಆಫೀಸರ್ ಸ್ಕೇಲ್ ವನ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಆಯೋಗ ನಿಗದಿಪಡಿಸಿರುವ ಅರ್ಹತೆಗಳು :
ಈ ಒಂದು ಬ್ಯಾಂಕಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿರಬೇಕು.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವಯೋಮಿತಿ ಅರ್ಹತೆ :
ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18 ರಿಂದ 28 ವರ್ಷದ ಒಳಗಿರಬೇಕು. ಆಫೀಸರ್ ಸ್ಕೇಲ್ 1 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 30 ವರ್ಷದ ಅವಧಿಯಲ್ಲಿರಬೇಕು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ ನಂತರ ಅರ್ಜಿ ಸಲ್ಲಿಸಿರಿ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 7 2024 ರಿಂದ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27, 2024 ಆಗಿದೆ.
ಅರ್ಜಿ ಲಿಂಕ್ – https://ibpsonline.ibps.in/rrb13oamay24/