ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು…
ಪ್ರೀತಿಯ ಓದುಗರೇ ಪ್ರಸ್ತುತ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ಉದ್ಯೋಗದ ಮಾಹಿತಿ ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳಿಂದ ಬರುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಕೂಡ ಮಾಹಿತಿ ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಭಾರಿ ಮಳೆ ಇರುವ ಕಾರಣ ರಜೆಯನ್ನು ಘೋಷಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
Gnanagharjane.com
ಹೌದು ಸ್ನೇಹಿತರೆ, ರಾಜ್ಯದಲ್ಲಿ ಇದೀಗ ಉತ್ತರ ಕನ್ನಡ ಜಿಲ್ಲೆ ಹಾಗೂ ಇನ್ನು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಇದರಿಂದಾಗಿ ಈ ಕೆಳಕಂಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಲ್ಲಿ ರಜೆಯನ್ನು ಘೋಷಿಸಲಾಗಿದ್ದು ಯಾವ ಯಾವ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ರಜೆಯನ್ನು ಘೋಷಿಸಲಾಗಿದೆ ಇಲ್ಲಿದೆ ನೋಡಿ…

ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರಿ ಮಳೆ ಮುನ್ಸೂಚನೆ ಇದ್ದು ಸೋಮವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮಂಗಳವಾರ ಯೆಲ್ಲೋ ಅಲರ್ಟ್ ನೀಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ರಾಜ್ಯದಲ್ಲಿ ಪ್ರವಾಹದ ಬಗ್ಗೆ ಎಚ್ಚರಿಕೆ ಕೊಟ್ಟಿದೆ. ರಾಜ್ಯದ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಲವು ಜಿಲ್ಲೆಗಳಲ್ಲಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹಾರಂಗಿ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದು, ಪ್ರವಾಹದ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಗದಗ ಜಿಲ್ಲೆಯ ಸಿಂಗಾಟಾಲೂರು ಬ್ಯಾರೇಜ್‌ನಿಂದ ಕೂಡ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುತ್ತಿದ್ದು ನದಿ ಪಾತ್ರದ ಜನಗಳಿಗೆ ಎಚ್ಚರಿಕೆಯಿಂದ ಇರಲು ಮನವಿ ಮಾಡಲಾಗಿದೆ.