HAL ಸಂಸ್ಥೆಯಲ್ಲಿ 10ನೇ ತರಗತಿ, ITI, ಡಿಪ್ಲೋಮಾ ಪಾಸಾದವರಿಗೆ ಉದ್ಯೋಗಾವಕಾಶ..! ಈ ಕೂಡಲೇ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಿ..! Apply Now..!

HAL ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ..!

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು…

ಜ್ಞಾನ ಘರ್ಜನೆಯ ಹೊಸ ಲೇಖನಕ್ಕೆ ಸ್ವಾಗತ..!

WhatsApp Group Join Now
Telegram Group Join Now

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ…

ಆರ್ಜಿ ಹೇಗೆ ಸಲ್ಲಿಸಬೇಕು ಯಾವ ಯಾವ ಹುದ್ದೆಗಳು ಖಾಲಿ ಇರಲಿವೆ ಒಟ್ಟು ಎಷ್ಟು ಸಂಖ್ಯೆಗಳಲ್ಲಿ ಹುದ್ದೆಗಳು ಖಾಲಿ ಇರಲಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ

ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು.

ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18 ಆಗಿದೆ. ಇಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ, ವಿದ್ಯಾರ್ಹತೆ ಏನು? ವಯೋಮಿತಿ, ವೇತನದ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡಲಾಗಿದೆ. ಕೊನೆವರೆಗೂ ಸಂಪೂರ್ಣವಾಗಿ ಈ ಲೇಖನವನ್ನು ಓದಿ ಅರ್ಜಿ ಸಲ್ಲಿಸಿ…

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಏನಿರಬೇಕು ಈಗಲೇ ತಿಳಿಯಿರಿ…!

– ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್) – 9 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
– ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
– ಅಸಿಸ್ಟೆಂಟ್ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್
– ಟೆಕ್ನಿಷಿಯನ್ (ಫಿಟ್ಟರ್) – 7 ಹುದ್ದೆ, ವಿದ್ಯಾರ್ಹತೆ: ಐಟಿಐ
– ಟೆಕ್ನಿಷಿಯನ್ (ಎಲೆಕ್ಟ್ರಿಕಲ್) – 5
ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-ಎನ್‌ಸಿಎಲ್‌ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ)-10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ)-13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ/ಎಸ್‌ಟಿ)-15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22,000 ರೂ.-46,511 ರೂ. ಮಾಸಿಕ ವೇತನವಿದೆ. ಆಯ್ಕೆಯಾದವರಿಗೆ 1 ವರ್ಷ ಅವಧಿಯ ತರಬೇತಿ ನೀಡಲಾಗುತ್ತದೆ. ಉದ್ಯೋಗದ ಸ್ಥಳ: ಬೆಂಗಳೂರು.

ಅರ್ಜಿ ಸಲ್ಲಿಕೆ ವಿಧಾನ:-

– HAL India Recruitment 2024 ಅಧಿಸೂಚನೆಗಾಗಿ ಈ ಕೆಳಗೆ ಕೊಟ್ಟಿರುವ ಲಿಂಕ್‌ ಕ್ಲಿಕ್‌ ಮಾಡಿ.
– ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://halardc.formflix.com/apply-online)
ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
– ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
– ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
– ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
– ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
– ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.
– ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: 
https://www.hal-india.co.in/ಗೆ ಭೇಟಿ ನೀಡಿ.

Leave a Reply

Your email address will not be published. Required fields are marked *