ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುವರೇ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಕರ್ನಾಟಕದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿಯೋಣ ಬನ್ನಿ
ಹೌದು ಸ್ನೇಹಿತರೆ ಕರ್ನಾಟಕ ಕೃಷಿ ಇಲಾಖೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಲಾಗಿದ್ದು ಯಾರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..!
Gnanagharjane.com
ಕಳೆದ ಜುಲೈ 24ರಂದು ನಡೆದ ಸಚಿವ ಸಂಪುಟದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು (Agricultural Minister) ಹುದ್ದೆಗಳ ವಿವರ ಹಾಗೂ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಸಚಿವ ಸಂಪುಟದ ಅಧಿಕೃತ ಮಾಹಿತಿಯ ಪ್ರಕಾರ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ….
ಖಾಲಿ ಹುದ್ದೆಗಳ ವಿವರ
ಕಳೆದ ಹಲವು ವರ್ಷಗಳಿಂದ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹಾಗೂ ಇತರೆ ಹುದ್ದೆಗಳ ನೇಮಕಾತಿ ನಡೆಯದೇ ಇರುವುದರಿಂದ ಕೃಷಿ ಇಲಾಖೆಯ ಯೋಜನೆಗಳನ್ನು ರೈತರಿಗೆ ಸಮರ್ಪಕವಾಗಿ ತಲುಪಿಸಲು ಆಗುತ್ತಿಲ್ಲ. ಜೊತೆಗೆ ರೈತರ ಇತರೆ ಕೆಲಸ ಕಾರ್ಯಗಳಿಗೂ ತೊಂದರೆ ಆಗುತ್ತಿದೆ. ಹೀಗಾಗಿ ಇಲಾಖೆಯ ಈ ಹುದ್ದೆಗಳನ್ನು ನೇಮಕಾತಿಗೆ ಸರ್ಕಾರ ಸನ್ನದ್ಧವಾಗಿದೆ. ಕೃಷಿ ಸಚಿವರ ಅಧಿಕೃತ ಮಾಹಿತಿಯ ಪ್ರಕಾರ ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ:
join WhatsApp Group
• (Agricultural Officer) : 118 ಹುದ್ದೆಗಳು
• ಸಹಾಯಕ ಕೃಷಿ ಅಧಿಕಾರಿ (Assistant Agricultural Officer) : 809
ಕಲ್ಯಾಣ ಕರ್ನಾಟಕ ವೃಂದದ ಖಾಲಿ ಹುದ್ದೆಗಳು
• ಕೃಷಿ ಅಧಿಕಾರಿ : 18 ಹುದ್ದೆಗಳು
• ಸಹಾಯಕ ಕೃಷಿ ಅಧಿಕಾರಿ : 159 ಹುದ್ದೆಗಳು
• ಬೆರಳಚ್ಚುಗಾರರು : 17 ಹುದ್ದೆಗಳು
• ದ್ವಿತೀಯ ದರ್ಜೆ ಸಹಾಯಕರು : 17 ಹುದ್ದೆಗಳು
ಕೃಷಿ ಇಲಾಖೆಯಲ್ಲಿನ FDA, SDA ಹುದ್ದೆಗಳ ನೇಮಕಾತಿ ಮಾಹಿತಿ
ಕೃಷಿ ಸಚಿವರ ಮಾಹಿತಿ ಪ್ರಕಾರ ಕೃಷಿ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದಡಿ ಹಾಗೂ ಕಲ್ಯಾಣ ಕರ್ನಾಟಕ ವೃಂದದಡಿ ಖಾಲಿ ಇರುವ ಎಫ್‌ಡಿಎ ಹಾಗೂ ಎಸ್‌ಡಿಎ ಹುದ್ದೆಗಳ ನೇಮಕಾತಿ ಕುರಿತು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸಲಾಗಿದ್ದು; ಅಧಿಕೃತ ಮಾಹಿತಿ ಪ್ರಕಾರ ಖಾಲಿ ಇರುವ ಹುದ್ದೆಗಳು ಈ ಕೆಳಗಿನಂತಿವೆ:
ಪ್ರಥಮ ದರ್ಜೆ ಸಹಾಯಕ ಹುದ್ದೆಗಳು
• ಉಳಿಕೆ ಮೂಲ ವೃಂದದಡಿ : 42 ಹುದ್ದೆಗಳು
• ಕಲ್ಯಾಣ ಕರ್ನಾಟಕ ವೃಂದದಡಿ : 19 ಹುದ್ದೆಗಳು
• ಒಟ್ಟು 61 ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು
• ಉಳಿಕೆ ಮೂಲ ವೃಂದದಡಿ : 53 ಹುದ್ದೆಗಳು
• ಕಲ್ಯಾಣ ಕರ್ನಾಟಕ ವೃಂದದಡಿ : 12 ಹುದ್ದೆಗಳು
• ಒಟ್ಟು 65 ಹುದ್ದೆಗಳು
ನೇಮಕ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದ ಹಂತದಲ್ಲಿ ದಾಖಲಾತಿ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯು ಶೀಘ್ರದಲ್ಲಿ ಆರಂಭವಾಗಲಿದ್ದು; ಕೃಷಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ನೇಮಕಾತಿಗಾಗಿ ಬೇಕಾಗಿರುವ ಸಂಪೂರ್ಣ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಿ.