ಜಿಲ್ಲಾ ಪಂಚಾಯತ್ ಹಾಗು ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ..
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು.!
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆಯ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 6 ತಾಲೂಕಿಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ:
ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು
ಹುದ್ದೆಯ ಸಂಖ್ಯೆ:
18
ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಪಾಸಾಗಿರಬೇಕು.
* ಲೈಬ್ರರಿ ಸೈನ್ಸ್ ಸರ್ಟಿಫಿಕೇಶನ್ ಕೋರ್ಸ್ ಪಾಸ್ ಮಾಡಿದ್ದು, ಹಾಗೂ ಕನಿಷ್ಟ 3 ತಿಂಗಳ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು.
* ಈ ವಿದ್ಯಾರ್ಹತೆ ಹೊರತು ಹೆಚ್ಚಿನ ವಿದ್ಯಾರ್ಹತೆ ಇದ್ದರೂ ಪರಿಗಣಿಸಲಾಗುವುದಿಲ್ಲ.
ವಯೋಮಿತಿ:
* ಕನಿಷ್ಠ ವಯೋಮಿತಿ – 18 ವರ್ಷ
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ – 35 ವರ್ಷ
* ಪ್ರವರ್ಗ 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ – 38 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ -40 ವರ್ಷ
* ಮೀಸಲಾತಿ ಕೋರುವವರು, ಅಗತ್ಯ ದಾಖಲೆ ಮಾಹಿತಿಗಳನ್ನು ಆನ್‌ಲೈನ್ ಅರ್ಜಿ ಸಲ್ಲಿಕೆ ವೇಳೆ ಕಡ್ಡಾಯವಾಗಿ ತಪ್ಪದೇ ನೀಡಬೇಕು.
ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು / ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
15-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-07-2024
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.500
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.200
* ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.100
ಅರ್ಜಿ ಶುಲ್ಕವನ್ನು ಕೆವಿಜಿಬಿ ಬ್ಯಾಂಕ್ ಹಾವೇರಿ ಶಾಖೆ ಖಾತೆ ನಂಬರ್ – 89160078109 ಗೆ ( ಹೆಸರು- ಸಿಎಒ, ಜಿಲ್ಲಾ ಪಂಚಾಯತ್, ಹಾವೇರಿ, IFSC CODE NO-KVGB0007210) ಪಾವತಿಸಿ, ಚಲನ್ ಪ್ರತಿಯನ್ನು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್‌ಲೋಡ್ ಮಾಡುವುದು.
ಅರ್ಜಿ ಸಲ್ಲಿಕೆ ಹೇಗೆ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://haveri.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.