ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ..!
ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು..
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಕೂಡಲೇ ಅರ್ಜಿ ಸಲ್ಲಿಸಿ
ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಯಾವ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸಲು ಯಾರು ಅರ್ಹತೆಯನ್ನು ಪಡೆದಿರುತ್ತಾರೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ (Anganwadi Jobs) ಭರ್ತಿಗೆ ಅರ್ಜಿ ಆಹ್ವಾನಿಸಿದೆ.
ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ (Anganwadi Workers) ಮತ್ತು 26 ಅಂಗನವಾಡಿ ಸಹಾಯಕಿಯರು (Anganwadi assistant) ಬೆಳಗಾವಿ ಜಿಲ್ಲೆಯ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ
• ಅಂಗನವಾಡಿ ಕಾರ್ಯಕರ್ತೆ ಹುದ್ದೆ: ಪಿಯುಸಿ ಪಾಸ್
• ಅಂಗನವಾಡಿ ಸಹಾಯಕಿ ಹುದ್ದೆ: 10ನೇ ತರಗತಿ ಪಾಸ್
ವಯಸ್ಸಿನ ಮಿತಿ
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ಹಾಗೂ ಗರಿಷ್ಟ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲಾತಿಗಳು
• ಅರ್ಜಿ ನಿಗದಿತ ನಮೂನೆ (ಆನ್‌ಲೈನ್)
• ಜನನ ಪ್ರಮಾಣ ಪತ್ರ
• ಜನ್ಮದಿನಾಂಕ ಇರುವ SSLC / PUC ಅಂಕಪಟ್ಟಿ
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
• ವಾಸಸ್ಥಳ ದೃಢೀಕರಣ ಪತ್ರ
• ಜಾತಿ ಪ್ರಮಾಣ ಪತ್ರ
• ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್
• ವಿಕಲಚೇತನರು, ವಿಧವೆಯರು, ವಿಚ್ಛೇದಿತೆಯರು, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿಸಿದ ಪ್ರಮಾಣ ಪತ್ರ
ಅಂಹನವಾಡಿ ಹುದ್ದೆಗಳಿಗೆ ನಾವು ಕೆಳಗೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ ಲಿಂಕ್ ಬಳಸಿಕೊಂಡು ಅರ್ಹ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಂಗನವಾಡಿ ಹುದ್ದೆಗಳ ಅರ್ಜಿ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಜಿಲ್ಲೆ ತಾಲ್ಲೂಕು, ಅಧಿಸೂಚನೆ ಸಂಖ್ಯೆ ಹುದ್ದೆಗಳ ಆಯ್ಕೆ ಜಾತಿ ಕಾಲಂ ಗಳನ್ನು ಆಯ್ಕೆ ಮಾಡಿ Submiಣ ಕ್ಲಿಕ್ ಮಾಡಿದರೆ ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ. ಅಲ್ಲಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅಗತ್ಯ ಪ್ರಮಾಣ ಪತ್ರಗಳನ್ನು ಅಪ್‌ಲೋಡ್ ಮಾಡಬೇಕು.
• ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಗಸ್ಟ್ 08, 2024 ಕೊನೆಯ ದಿನವಾಗಿರುತ್ತದೆ.
• ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 04, 2024 ಕೊನೆಯ ದಿನವಾಗಿದೆ.