ರೇಶನ್ ಕಾರ್ಡ್ ಸ್ಥಗಿತ..!!
ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನಗೆಳನ್ನು ಜಾರಿಗೊಳಿಸಲಾಗುತ್ತಿದೆ. ಆ ಯೋಜನೆಗಳು ಬಿಪಿಎಲ್ ಕಾರ್ಡ್ ಇದ್ದವರಿಗೆ ಮಾತ್ರವೇ ನೀಡಲಾಗುತ್ತಿದೆ ಎಂಬುದಾಗಿ ವದಂತಿ ರಾಜ್ಯಾಧ್ಯಂತ ಹಬ್ಬಿದೆ. ಹೀಗಾಗಿ ಬಿಪಿಎಲ್ ಕಾರ್ಡ್ ಗಾಗಿ ( BPL Card ) ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
ಆದ್ರೇ ನಾವು ಹೊಸದಾಗಿ ಬಿಪಿಎಲ್ ಕಾರ್ಡ್ ಗಳನ್ನು ನೀಡಲು ಅರ್ಜಿಗಳನ್ನು ಪಡೆಯುತ್ತಿಲ್ಲ ಎಂಬುದಾಗಿ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಮಾತನಾಡಿರುವಂತ ಆಹಾರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಅವರು, ಹೊಸದಾಗಿ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸೋದಕ್ಕೆ ಸರ್ಕಾರದ ಒಪ್ಪಿಗೆ ಅವಶ್ಯಕತೆ ಇದೆ. ಈಗ ಯಾವುದೇ ಹೊಸ ಕಾರ್ಡ್ ಗಳನ್ನು ಮಾಡುತ್ತಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಜೂನ್ ಅಥವಾ ಜುಲೈ ತಿಂಗಳಿನಿಂದ ಹೊಸ ಬಿಪಿಎಲ್ ಕಾರ್ಡ್ ಗಳಿಗಾಗಿ ( New BPL Card Application ) ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ. ಹೀಗಾಗಿಯೇ ಆಹಾರ ಇಲಾಖೆಯ ವೆಬ್ ಸೈಟ್ ಸಹ ಕ್ಲೋಸ್ ಮಾಡಿದ್ದೇವೆ ಎಂದಿದ್ದಾರೆ.
2020 ರಿಂದ 2023ರವರೆಗೆ 8 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಹೊಸ ಪಡಿತರ ಚೀಟಿಯನ್ನು ಪಡೆಯಲು ಸಲ್ಲಿಸಲಾಗಿತ್ತು. 3 ತಿಂಗಳ ಹಿಂದೆ 1.50 ಲಕ್ಷಕ್ಕೂ ಹೆಚ್ಚು ಹೊಸ ಕಾರ್ಡ್ ಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.
ಈಗ ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗಳಿಗೆ ಅವಶ್ಯಕತೆ ಇದೆ. ನಮಗೆ ಹೊಸ ಕಾರ್ಡ್ ಮಾಡಿಕೊಡಿ ಎಂಬುದಾಗಿ ಅರ್ಜಿ ಸಲ್ಲಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗೆ ಕಳೆದ 15 ದಿನಗಳಿಂದ ಹೆಚ್ಚು ಅರ್ಜಿ ಸಲ್ಲಿಸುತ್ತಿದ್ದಾರೆ. ಜೊತೆಗೆ ನಮ್ಮ ಟೋಲ್ ಫ್ರೀ ಸಂಖ್ಯೆಗೂ ಕರೆ ಮಾಡಿ ಕೇಳುತ್ತಿದ್ದಾರೆ ಎಂಬುದಾಗಿ ಹೇಳಿದ್ದಾರೆ.
ನಾವು ಯಾವುದೇ ಬಿಪಿಎಲ್ ಕಾರ್ಡ್ ಗೆ ಅರ್ಜಿ ಪಡೆಯುತ್ತಿಲ್ಲ. ಎಲೆಕ್ಷನ್ ಘೋಷಣೆ ಆದ ಮೇಲೆ ಚುನಾವಣಾ ನೀತಿ ಸಂಹಿತೆಯ ನಂತ್ರ ಹೊಸ ಅರ್ಜಿಗಳನ್ನು ಸ್ವೀಕರಿಸುತ್ತಿಲ್ಲ. ಈಗಾಗಲೇ ಸಲ್ಲಿಸಿರುವಂತ 3 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇವೆ. ಹೀಗಾಗಿ ಈಗ ಹೊಸ ಪಡಿತರ ಚೀಟಿಗಳನ್ನು ( New Ration Card ) ನೀಡುವ ಸಂಬಂಧ ಅರ್ಜಿಗಳನ್ನು ಪಡೆಯುತ್ತಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.