ಬಿಪರ್ಜಾಯ್ ಚಂಡಮಾರುತ ಪರಿಣಾಮ
ದೇಶದಲ್ಲಿ ಬಿಪರ್ಜಾಯ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಬೆನ್ನೇಲೆ ಕರ್ನಾಟಕ ರಾಜ್ಯದ ಮೇಲೂ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ಅಧಿಕ ಅಳೆಗಳು ಏಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಎಚ್ಚರಿಕೆ
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಸಮುದ್ರದ ಸಮೀಪ ಹೋಗುವದನ್ನೂ ಕೂಡ ನಿಷೇಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 42 ಕಿಮೀ ಕರಾವಳಿ ತೀರವನ್ನು ಹೊಂದಿದೆ. ಸಮುದ್ರದ ಎತ್ತರ 3 ರಿಂದ 4 ಮೀಟರ್ ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಇದ್ದು, ಜೂನ್ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ
ಬಿಪರ್ ಜಾಯ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳು ಬಿರುಗಾಳಿ, ಗುಡುಗು, ಮಿಂಚಿನ ಸಹಿತ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಮಲೆನಾಡು ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಕೂಡ ಮುಂದಿನ 5 ದಿನಗಳ ಕಾಲ ಸಂಜೆ ವೇಳೆ ಉತ್ತಮ ಮಳೆ ಬೀಳುವ ಮುನ್ಸೂಚನೆ ನೀಡಿದೆ.
ಗುಜರಾತ್‌ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ
ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತ ತೀವ್ರಗೊಂಡಿದ್ದು, ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಚಂಡಮಾರುತ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗುವ ಅಪಾಯವಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 41000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.