ಅಕ್ಟೋಬರ್ ಶುರುವಿನಿಂದ ರೈತರಿಗೆ ಸಂತಸ ತಂದ ಮಳೆರಾಯ…! ಮುಂದಿನ 24 ಗಂಟೆಯಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ…!

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ

WhatsApp Group Join Now
Telegram Group Join Now

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ 7 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಧರ್ಮಸ್ಥಳ, ಕ್ಯಾಸಲ್​ರಾಕ್, ಕೊಟ್ಟಿಗೆಹಾರದಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಾಣಿ, ಭಾಗಮಂಡಲ, ಉಪ್ಪಿನಂಗಡಿ, ವಿರಾಜಪೇಟೆ, ಅಂಕೋಲಾ, ಕೊಲ್ಲೂರಿನಲ್ಲೂ ಹೆಚ್ಚು ಮಳೆಯಾಗಿದೆ.

ಗೋಕರ್ಣ, ಸಿದ್ದಾಪುರ,ಮಡಿಕೇರಿ, ಕುಮಟಾ, ಮಂಚಿಕೆರೆ, ಕದ್ರಾ, ಪುತ್ತೂರು, ಲೋಂಡಾ, ನಾಪೋಕ್ಲು, ಪೊನ್ನಂಪೇಟೆ, ಸಕಲೇಶಪುರ, ಗೇರುಸೊಪ್ಪ, ಪಣಂಬೂರು, ಶಿರಾಲಿ, ಯಲ್ಲಾಪುರ, ಹೊನ್ನಾವರ, ಕಾರವಾರ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಕಲಬುರಗಿ, ಹುಂಚದಕಟ್ಟೆ, ತಾಳಗುಪ್ಪ, ಲಿಂಗನಮಕ್ಕಿ, ಸಿದ್ದಾಪುರ, ಕಿರವತ್ತಿ, ಮುಂಡಗೋಡ, ಶೃಂಗೇರಿ, ಕಮ್ಮರಡಿ, ಕಳಸ, ಹಾರಂಗಿ, ಸುಳ್ಯ, ಹಳಿಯಾಳ, ಬನವಾಸಿ, ಕೋಟ, ಹುಕ್ಕೇರಿ, ಸಂಕೇಶ್ವರ, ಹಿಡಕಲ್ ಅಣೆಕಟ್ಟು, ಧಾರವಾಡ, ಕಲಘಟಗಿ, ಸೇಡಂ, ಸೋಮವಾರಪೇಟೆ, ಬೇಲೂರು, ಹುಣಸೂರು, ಗೌರಿಬಿದನೂರಿನಲ್ಲಿ ಮಳೆಯಾಗಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ಉಷ್ಣಾಂಶ 32.7 ಡಿಗ್ರಿ ಸೆಲ್ಸಿಯಸ್​ ಶಿರಾಲಿಯಲ್ಲಿ ದಾಖಲಾಗಿದೆ. ಅತಿ ಕಡಿಮೆ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ಬಾಗಲಕೋಟೆಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ , ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 45-55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆ ಹಲವೆಡೆ ಮಳೆಯಾಗಲಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲೂ ಸಂಜೆ ಅಥವಾ ರಾತ್ರಿ ವೇಳೆ ಜೋರು ಮಳೆಯಾಗಲಿದೆ ಎಂದು ತಿಳಿಸಿದೆ.ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ, ಸುಲೇಪೇಟದಲ್ಲಿ 5 ಸೆಂ.ಮೀ, ಉತ್ತರ ಕನ್ನಡದ ಕದ್ರಾ, ಕಲಬುರಗಿಯ ಚಿತ್ತಾಪುರ, ಯಾದಗಿರಿಯ ಸೈದಾಪುರ, ವಿಜಯಪುರದ ಇಂಡಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗಲಿದ್ದು, ಹಬ್ಬದ ಸಂಭ್ರಮಕ್ಕೆ ವರುಣ ಅಡ್ಡಿಯಾಗುವ ಸಾಧ್ಯತೆಗಳಿವೆ.

ಇನ್ನು ಕರಾವಳಿ ಭಾಗದಲ್ಲಿ ಎರಡು ದಿನ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆಸಮುದ್ರ ತೀರಕ್ಕೆ ದೊಡ್ಡ ಗಾತ್ರದ ಅಲೆಗಳು ಅಪ್ಪಳಿಸುತ್ತಿದ್ದು, ಪ್ರವಾಸಿಗರಿಗೆ ಮೈಕ್ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ.

ಎಚ್ಚರಿಕೆ ನಡುವೆಯೂ ಕೆಲ ಪ್ರವಾಸಿಗರು ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿಂದು ಭಯಂಕರ ಮಳೆಯಾಗುವ ಅಲರ್ಟ್ ನೀಡಲಾಗಿದೆ. ಇಂದು ಈ ಜಿಲ್ಲೆಗಳಲ್ಲಿ 50 ರಿಂದ 200 ಮಿ.ಮೀ ನಷ್ಟು ಮಳೆ ಸುರಿಯವ ಸಾಧ್ಯತೆಗಳಿವೆ..

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

Leave a Reply

Your email address will not be published. Required fields are marked *