ನವೆಂಬರ್ ತಿಂಗಳಿನ ಶುರುವಿನಲ್ಲಿ ಮಳೆರಾಯನ ಆರ್ಭಟ ಜೋರು..! ಯಾವ ಸ್ಥಳದಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಈಗಲೇ ತಿಳಿಯಿರಿ…!

ಕರ್ನಾಟಕ, ಅಕ್ಟೋಬರ್, 28: ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗುತ್ತಲೇ ಇದೆ. ಇನ್ನು ಮತ್ತೊಂದೆಡೆ ಇದೀಗ ಬಂಗಾಳಕೊಲ್ಲಿಯಲ್ಲಿ ಹಮೂನ್ ಚಂಡಮಾರುತ ಉಂಟಾಗಿದ್ದು, ಇದರ ಪ್ರಭಾವ ದಕ್ಷಿಣ ಭಾರತರದ ರಾಜ್ಯಗಳ ಮೇಲೆ ಬೀರಲಿದೆ.

WhatsApp Group Join Now
Telegram Group Join Now

ತಮಿಳುನಾಡು, ಕೇರಳ ಸೇರಿದಂತೆ ಕರ್ನಟಕದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ವ್ಯಾಪಕವಾಗಿ ಮಳೆರಾಯ ಆರ್ಭಟಿಸಲಿದ್ದು, ಭೂಮಿಗೆ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈಗಾಗಲೇ ಮುಂಗಾರು ಕೈಕೊಟ್ಟಿದ್ದು, ಇದೀಗ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರದಿಂದ ಹಿಂಗಾರು ಚುರುಕಾಗಲಿದೆ.

ಅಕ್ಟೋಬರ್‌ 29ರಂದು ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹಮೂನ್ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಅಕ್ಟೋಬರ್ 29ರಿಂದ ನವೆಂಬರ್‌ 1ರವರೆಗೆ ವ್ಯಾಪಕ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.ಇನ್ನು ಕೆಲವು ರಾಜ್ಯಗಳಲ್ಲಿ ಅಕ್ಟೋಬರ್‌ 21ರಿಂದಲೇ ಹಿಂಗಾರು ಮಳೆ ಪ್ರವೇಶ ಆಗಿದೆ.

ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತದ ಪರಿಣಾಮದಿಂದ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಮಳೆ ಬೀಳುವ ಮುನ್ಸೂಚನೆ ನೀಡಿದೆ.

ಕೇರಳದಲ್ಲಿ ಭಾನುವಾರ ಹಾಗೂ ಸೋಮವಾರ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು (ಶನಿವಾರ) ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇನ್ನು ಅರುಣಾಚಲ ಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಅಲ್ಲಲ್ಲಿ ಚದುರಿದ ಮಳೆ ಸುರಿಯುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಒಟ್ಟಿನಲ್ಲಿ ಒಂದು ವೇಳೆ ಹವಾಮಾನ ಇಲಾಖೆಯ ಪ್ರಕಾರ ನಾಳೆಯಿಂದ ಮೂರು ದಿನಗಳ ಕಾಲ ಅಬ್ಬರದ ಮಳೆಯಾದರೆ ಜಲಾಶಳಿಗೆ ಜೀವ ಕಳೆಬಂದಂತಾಗುತ್ತದೆ. ಅಲ್ಲದೆ ಕರ್ನಾಟಕ, ತಮಿಳುನಾಡು ನಡುವೆ ನಡೆಯುತ್ತಿರುವ ನೀರಿನ ವಿವಾದಕ್ಕೆ ಬ್ರೇಕ್‌ ಬಿದ್ದಂತಾಗುತ್ತದೆ.

Leave a Reply

Your email address will not be published. Required fields are marked *