ಕರ್ನಾಟಕದ ಜನತೆಗೆ ನಮಸ್ಕಾರಗಳು ಈಗಾಗಲೇ ನಿಮಗೆ ತಿಳಿದಿರುವಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸುತ್ತಿದ್ದುಈಗ ಆಹಾರ ಸರಬರಾಜು ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸುತ್ತಿದ್ದು ಅರ್ಜಿ ಸಲ್ಲಿಸುವವರು 10ನೇ ತರಗತಿ ಅಥವಾ ಸೆಕೆಂಡ್ ಪಿಯುಸಿ ಪಾಸ್ ಆಗಿದ್ದರೆ ಸಾಕು… ಅರ್ಜಿ ಸಲ್ಲಿಸಿ ಉದ್ಯೋಗವನ್ನು ಗಿಟ್ಟಿಸಿಕೊಳ್ಳಲು ಉತ್ತಮವಾದಂತಹ ಅವಕಾಶವನ್ನು ನೀಡಿದ್ದು ಇದರ ಸಂಪೂರ್ಣ ವಿವರಣೆ ಈ ಕೆಳಗಿನಂತಿದೆ ನೋಡಿ…!
ಕರ್ನಾಟಕ ಆಹಾರ ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಇಲಾಖೆಯ ಕಾರ್ಯಗಳನ್ನು ತಾಲೂಕು ಹಂತಗಳಲ್ಲಿ ಯಶಸ್ವಿಯಾಗಿ ನಿರ್ವಹಿಸಲು ಸಹಾಯಕ ನಿರ್ದೇಶಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊಸದಾಗಿ ಸೃಜಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ.
ಇದರಲ್ಲಿ ಬಹುತೇಕ ಹುದ್ದೆಗಳು ನೇರ ನೇಮಕಾತಿಯ ಮುಖಾಂತರ ಭರ್ತಿಯಾಗಲಿದ್ದು, ಉದ್ಯೋಗಾಸಕ್ತರಿಗೆ ಅವಕಾಶಗಳು ಲಭ್ಯವಾಗುತ್ತವರ. ಒಟ್ಟು 1150 ಹುದ್ದೆಗಳನ್ನು ಹೊಸದಾಗಿ ಸೃಜಿಸಲಾಗುತ್ತಿದ್ದು, ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆಸಹಾಯಕ ನಿರ್ದೇಶಕರು198, ಪ್ರಥಮ ದರ್ಜೆ ಸಹಾಯಕರು50, ದ್ವಿತೀಯ ದರ್ಜೆ ಸಹಾಯಕರು188, ಡಾಟಾ ಎಂಟ್ರಿ ಆಪರೇಟರ್238, ಗ್ರೂಪ್ ಡಿ238 , ಚಾಲಕರು238, ಒಟ್ಟು ಹುದ್ದೆಗಳು1150.
ವೇತನ ಶ್ರೇಣಿ:
ಸಹಾಯಕ ನಿರ್ದೇಶಕರು43100-52650. ಪ್ರಥಮ ದರ್ಜೆ ಸಹಾಯಕರು27650-52650. ದ್ವಿತೀಯ ದರ್ಜೆ ಸಹಾಯಕರು21400-42000. ಡಾಟಾ ಎಂಟ್ರಿ ಆಪರೇಟರ್19000. ಗ್ರೂಪ್ ಡಿ17000-28950. ಚಾಲಕರು21400-42000.
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹತ್ತನೇ, ಪಿಯುಸಿ, ಪದವಿ ವಿದ್ಯಾರ್ಹತೆ ಮುಗಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 600/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 300/-
ಪ.ಜಾ/ ಪಪಂ/ ಕೆ1 / ಅಂಗವಿಕಲ ಸೇರಿದ ಅಭ್ಯರ್ಥಿಗಳಿಗೆ : ಶುಲ್ಕ ವಿನಾಯಿತಿ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/-
ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.