12ನೇ ತರಗತಿ ಪಾಸಾದವರಿಗೆ ಹೆಡ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ! ಸಂಬಳ 81700 ರೂ. ಈಗಲೇ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಿರಿ.
ಭಾರತೀಯ ಕೇಂದ್ರ ಸರ್ಕಾರದ ಸಂಸ್ಥೆಯಾಗಿರುವ ರಾಷ್ಟ್ರೀಯ ತನಿಕಾ ಸಂಸ್ಥೆಯಲ್ಲಿ 12ನೇ ತರಗತಿ ಪಾಸಾದವರಿಗೆ ಅನೇಕ ಹುದ್ದೆಗಳ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ ಸೇರಿದಂತೆ, ಇತರೆ ಎಲ್ಲ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ. ಅರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಕೇಂದ್ರ ಸರ್ಕಾರದ ನೌಕರಿ ನಿಮ್ಮದಾಗಿಸಿಕೊಳ್ಳಿ.
ರಾಷ್ಟ್ರೀಯ ತನಿಕಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು ಈ ಕೆಳಗಿನಂತಿವೆ – ರಾಷ್ಟ್ರೀಯ ತನಿಕಾ ಸಂಸ್ಥೆಯಲ್ಲಿ ಒಟ್ಟಾರೆ 119 ಹುದ್ದೆಗಳು ಖಾಲಿ ಇದ್ದು ಅವುಗಳಲ್ಲಿ ಇನ್ಸ್ಪೆಕ್ಟರ್ 43 ಹುದ್ದೆಗಳು, ಸಬ್ ಇನ್ಸ್ಪೆಕ್ಟರ್ 51 ಹುದ್ದೆಗಳು, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ 13 ಹುದ್ದೆಗಳು, ಹೆಡ್ ಕಾನ್ಸ್ಟೇಬಲ್ 12 ಹುದ್ದೆಗಳು ಖಾಲಿ ಇವೆ. ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ, ವಿದ್ಯಾರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ಪಡೆಯಿರಿ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವ ವಿದ್ಯಾರ್ಹತೆ ಹೊಂದಿರಬೇಕು –
ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನಂತೆ ವಿದ್ಯಾರ್ಹತೆ ಹೊಂದಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ( National Investigation Agency ), ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನಂತೆ ವಿದ್ಯಾರ್ಹತೆ ಹೊಂದಿರಬೇಕು.
ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಶಿಕ್ಷಣ ಪಡೆದಿರಬೇಕು ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12ನೇ ತರಗತಿ ಪಾಸ್ ಆಗಿದ್ದರೆ ಸಾಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿಯನ್ನು ಸಂಸ್ಥೆಯ ನಿಯಮಗಳಿಗೆ ಅನುಸಾರವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಆದ್ದರಿಂದ ಅಭ್ಯರ್ಥಿಗಳ ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣವಾಗಿ ಮತ್ತೊಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಸಬೇಕಾಗಿದೆ. ಹುದ್ದೆಗಳಿಗೆ ರಜೆ ಸಲ್ಲಿಸಲು ಇನ್ನೂ ಹೆಚ್ಚಿನ ಮಾಹಿತಿ ಬೇಕಾದರೆ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಿರಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವು ಉತ್ತಮವಾಗಿದ್ದು, ಈ ಒಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸಂಬಳ 81,700 ರೂಪಾಯಿ ವರೆಗೆ ಇದ್ದು, ಹುದ್ದೆಗಳಿಗೆ ಅನುಗುಣವಾಗಿ ನೀಡಲಾಗುತ್ತದೆ.
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವಿಳಾಸ : SP (Adm), NIA HQ, Opposite CGO Complex, Lodhi Road, New Delhi-110003
ಅರ್ಜಿ ಸಲ್ಲಿಸುವ ಲಿಂಕ್
ಇದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಫೆಬ್ರುವರಿ 20, 2024 ರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಇದೇ ರೀತಿ ಹೆಚ್ಚಿನ ಉದ್ಯೋಗ ಮಾಹಿತಿ, ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ರೈತರಿಗೆ ಸಹಾಯವಾಗುವಂತ ಇದ್ದರೆ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಜಾಲತಾಣಕ್ಕೆ ಭೇಟಿ ನೀಡಿ.