PUC ಪಾಸಾದವರು 364 ಭೂಮಾಪಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದಿದ್ದರೆ, ಇಲ್ಲಿದೆ ಮುಖ್ಯ ಮಾಹಿತಿ : Land Surveyor Recruitment
ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ( KPSC ) ಕೆಲ ದಿನಗಳ ಹಿಂದೆಯೇ ಭೂಮಾಪಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ನಿಗದಿಪಡಿಸಲಾಗಿರುವ ವಿದ್ಯಾರ್ಹತೆಯು PUC. ಆದ್ದರಿಂದ ಅನೇಕ ವಿದ್ಯಾರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸದೇ ಇರುವವರು ಈ ಕೂಡಲೇ ಮಾಹಿತಿಯನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಕನ್ನಡ ಜನತೆಗೆ. ನಮ್ಮ ಈ ಜ್ಞಾನ ಘರ್ಜನೆ ಜಾಲತಾಣದಲ್ಲಿ ನಾವು ದಿನನಿತ್ಯ ನಮ್ಮ ಕರುನಾಡ ಜನತೆಗೆ ಸಹಾಯವಾಗುವಂಥ ಮಾಹಿತಿಯನ್ನು ತಿಳಿಸುತ್ತಿದ್ದೇನೆ.
Finance
ಇಂದಿನ ಈ ಲೆಕ್ಕದಲ್ಲಿ ನಾವು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಕರ್ನಾಟಕ ಸರ್ಕಾರದ ಭೂಮಾಪನ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರ ( land surveyor ) ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ..! ಹಾಗೆಯೇ ಉಚಿತ ಹೊಲಿಗೆ ಯಂತ್ರ ತರಬೇತಿಗೂ ಅರ್ಜಿ ಆಹ್ವಾನ..! ಮಹಿಳೆಯರು ಈಗಲೇ ಅರ್ಜಿ ಸಲ್ಲಿಸಿ..!
ಭೂಮಾಪಕರ ಹುದ್ದೆಗಳ ನೇಮಕಾತಿ ವಿವರ :
ಬಂಧುಗಳೇ, ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ರಾಜ್ಯದ ಭೂಮಪನ ಕಂದಾಯ ವ್ಯವಸ್ಥೆ ಮತ್ತು ಹೂ ದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಾದ ಭೂಮಾಪಕರು ಅಥವಾ ಲ್ಯಾಂಡ್ ಸರ್ವೆಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 364 ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆಗಳು :
ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುವುದಾದರೆ, ನೀವು ಕನಿಷ್ಠ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಪಿಯುಸಿಯಲ್ಲಿ ಪಾಸಾಗಿದ್ದರೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತೀರಿ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಬಯಸುವುದಾದರೆ ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ KPSC ಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಪರಿಶೀಲಿಸಿಕೊಳ್ಳಬಹುದಾಗಿದೆ.
ವಯೋಮಿತಿ ಮಾನದಂಡಗಳು :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯು 35 ವರ್ಷಗಳವರೆಗೆ ಇದೆ. ಅದೇ ರೀತಿ ಮೀಸಲಾತಿಯನ್ನು ಬಯಸುವ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯೋ ಸಡಿಲಿಕೆ ಕೂಡ. ಇದರ ಒಂದು ಮಾಹಿತಿಯನ್ನು ನೀವು ಪಡೆದುಕೊಳ್ಳಲು ಬಯಸುವುದಾದರೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.
ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :
ಭೂಮಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು ವರ್ಗಗಳ ಅನುಸಾರ ಈ ಕೆಳಗಿನಂತೆ ಇರುತ್ತದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 600 ಅರ್ಜಿ ಶುಲ್ಕವಿದೆ. ಹಿಂದುಳಿದ ವರ್ಗಗಳಲ್ಲಿ ಬರುವ ಅಭ್ಯರ್ಥಿಗಳಿಗೆ ರೂ.300. ಮಾಜಿ ಸೈನಿಕ ವರ್ಗದ ಅಭ್ಯರ್ಥಿಗಳಿಗೆ ಐವತ್ತು ರೂಪಾಯಿ. ಇನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ. ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ನೀವು ಆನ್ಲೈನ್ ಮುಖಾಂತರವೇ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
ವಿದ್ಯಾರ್ಥಿಗಳೇ ನೀವು ಪಿಯುಸಿ ಮುಗಿಸಿದ್ದರೆ, ಈ ಕೂಡಲೇ ತಡ ಮಾಡದೆ ಅರ್ಜಿ ಸಲ್ಲಿಸಿ. ಏಕೆಂದರೆ ಅರ್ಜಿ ಸಲ್ಲಿಸಲು ಈಗಾಗಲೇ ಆರಂಭವಾಗಿರುವುದರಿಂದ ತಡ ಮಾಡದೆ ಅರ್ಜಿ ಸಲ್ಲಿಸಿ. ನಿಗದಿಪಡಿಸಲಾಗಿರುವ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಏಪ್ರಿಲ್ 2024.
ಅರ್ಜಿ ಸಲ್ಲಿಸುವ ಲಿಂಕ್ : https://kpsc.kar.nic.in