ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ..! ಹಲೋ ಎಲ್ಲೋ ಕಲರ್ ಘೋಷಣೆ ಮಾಡಿದ್ದು ಯಾವ ಸ್ಥಳಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಈಗಲೇ ತಿಳಿಯಿರಿ..! ಉತ್ತರ ಕರ್ನಾಟಕದಲ್ಲೂ ಮಳೆರಾಯನ ಆರ್ಭಟ ಜೋರಾಗಲಿದೆ..! Rain Alert

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು

ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ರೈತರಿಗೆ ಉಪಯುಕ್ತವಾಗುವಂತಹ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ರಾಜ್ಯದಲ್ಲಿ ನಾಳೆಯಿಂದ ಮತ್ತೆ ಮಳೆರಾಯನ ಆಗಮನವಾಗಲಿದ್ದು ಯಾವ ಯಾವ ಸ್ಥಳಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಈಗ ತಿಳಿದುಕೊಳ್ಳೋಣ ಬನ್ನಿ

WhatsApp Group Join Now
Telegram Group Join Now

ಕಳೆದ ಹಲೋ ದಿನಗಳಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನು ಭರಿಸುತ್ತಿದ್ದು ಇದೀಗ ನಾಳೆಯಿಂದ ಮತ್ತೆ ಮಳೆರಾಯನ ಆಗಮನವಾಗಲಿದ್ದು ರಾಜ್ಯದ ಒಳನಾಡಿನಲ್ಲಿ ಯಾವ ಯಾವ ಸ್ಥಳಗಳಲ್ಲಿ ಅತಿ ಹೆಚ್ಚಿನ ಮಳೆ ಬೀಳಲಿದೆ ಈಗ ತಿಳಿದುಕೊಳ್ಳೋಣ ಬನ್ನಿ..

ಕರ್ನಾಟಕದ 10ನೇ ತರಗತಿ ವಿದ್ಯಾರ್ಥಿಗಳ ರಿಸಲ್ಟ್ ಪ್ರಕಟ Click Here
For More Information Click Here
sslc result 2024

ರಾಜ್ಯದಲ್ಲಿ ಮಳೆರಾಯ ಅಲ್ಲಲ್ಲಿ ತಂಪೆರೆಯುತ್ತಿದ್ದ ಗುರುವಾರದಿಂದ ಒಂದು ವಾರ ಕಾಲ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಲ್ಲದೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಕೂಡ ನೀಡಿದೆ. ಮೇ 9 ರಿಂದ 15ರವೆರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಗುರುವಾರದಿಂದ ಒಂದು ವಾರ ಕಾಲ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ಮೇ 9 ರಿಂದ 15ರವೆರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಮೇ 9ರಂದು ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಮೇ 10ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ದಾವಣಗೆರೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಮೇ 11 ಹಾಗೂ 12ರಂದು ದಕ್ಷಿಣ ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವೆಡೆ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 13ರಿಂದ 15ರವರಗೆ ರಾಜ್ಯದ ಕೆಲ ಭಾಗಗಳಲ್ಲಿ ಕನಿಷ್ಠ 50 ಮಿ.ಮೀ.ನಿಂದ ಗರಿಷ್ಠ 70 ಮಿ.ಮೀ. ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ. ಈ ಅವಧಿಗೆ ಯಾವುದೇ ಮುನ್ನೆಚ್ಚರಿಕೆ ನೀಡಿಲ್ಲ.

ಈ ನಡುವೆ, ಮೇ 7ರ ರಾತ್ರಿಯಿಂದ 8ರ ಬೆಳಗ್ಗೆವರೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿಯಲ್ಲಿ 4 ಸೆಂ.ಮೀ., ಚಿತ್ರದುರ್ಗ ಜಿಲ್ಲೆಯ ಪರಶುರಾಂಪುರ, ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ. ಆದರೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು.

ಮೇ 8ರಂದು ಬುಧವಾರ ಸಂಜೆ ಬೆಂಗಳೂರು ನಗರದಲ್ಲಿ ಸಾಧಾರಣ ಮಳೆ ಸುರಿದಿದೆ. ಮುಂದಿನ 48 ಗಂಟೆಗಳಲ್ಲಿ ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಪ್ರದೆೇಶಗಳಲ್ಲಿ ಸಂಜೆ-ರಾತ್ರಿಯ ವೇಳೆ ಗುಡುಗು-ಮಿಂಚು ಹಾಗೂ ಗಾಳಿಯಿಂದ ಕೂಡಿದ ಲಘುವಾದ ಮಧ್ಯಮ ಮಳೆ ಸುರಿಯಲಿದೆ ಎಂದು ಹೇಳಿದೆ.

Leave a Reply

Your email address will not be published. Required fields are marked *