ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು
ಪ್ರೀತಿಯ ಓದುಗರೆ ಪ್ರಸ್ತುತ ಈ ನಮ್ಮ ಜ್ಞಾನ ಘರ್ಜನೆ ಪ್ರತಿನಿತ್ಯದ ಲೇಖನಗಳಲ್ಲಿ ನಾವು ಉದ್ಯೋಗದ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಪ್ರಸ್ತುತ ಲೇಖನದಲ್ಲಿ ಕರ್ನಾಟಕದ ಅಗ್ನಿಶಾಮಕ ದಳದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ..!
ಹೌದು ಸ್ನೇಹಿತರೆ, ಕರ್ನಾಟಕ ಅಗ್ನಿಶಾಮಕ ದಳದಲ್ಲಿ ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿರಲಿದೆ ಹಾಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳನ್ನು ಸಂಪೂರ್ಣ ಮಾಹಿತಿ
ಕರ್ನಾಟಕ ರಾಜ್ಯ ಅಗ್ನಿ ಶಾಮಕ & ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟವಾಗಲಿದೆ.
ಅಗ್ನಿ ಶಾಮಕ ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಠಾಣಾಧಿಕಾರಿ, ಚಾಲಕ ತಂತ್ರಜ್ಞ ಸೇರಿದಂತೆ ಒಟ್ಟು 975 ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅರ್ಜಿ ಆಹ್ವಾನಿಸಲಾಗುತ್ತದೆ. ಅರ್ಹ & ಆಸಕ್ತ ಅಭ್ಯರ್ಥಿಗಳು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹುದ್ದೆಗಳ ವಿವರ/ Post Details:
ಇಲಾಖೆ: ಕರ್ನಾಟಕ ಅಗ್ನಿಶಾಮಕ & ತುರ್ತುಸೇವೆಗಳ ಇಲಾಖೆಹುದ್ದೆಯ ಹೆಸರು: ಠಾಣಾಧಿಕಾರಿ, ಚಾಲಕ & ಚಾಲಕ ತಂತ್ರಜ್ಞಒಟ್ಟು ಹುದ್ದೆಗಳು: 975 ಹುದ್ದೆಗಳುಕೆಲಸದ ಸ್ಥಳ: ಕರ್ನಾಟಕ
ಹುದ್ದೆವಾರು ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಶೀಘ್ರದಲ್ಲೇ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ
ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: ಶೀಘ್ರದಲ್ಲೆ