Gnanagharjane
ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ 1000+ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಅಹ್ವಾನ : ಕೇಂದ್ರ ಸರ್ಕಾರದ ಈ ಹುದ್ದೆಗಳಿಗೆ ಭರ್ಜರಿ 20,200 ಸಂಬಳ
ಭಾರತೀಯ ರೈಲ್ವೆ ಇಲಾಖೆಯಲ್ಲಿ ಬರುವಂತಹ 19 ವಲಯಗಳಲ್ಲಿ ಒಂದಾಗಿರುವಂತಹ ಆಗ್ನೇಯ ರೈಲ್ವೆ ವಲಯದಲ್ಲಿ ಖಾಲಿ ಇರುವಂತಹ ಅಸಿಸ್ಟೆಂಟ್ ಲೋಕೋ ಪೈಲೆಟ್ ಮತ್ತು ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನಿಸಿದೆ.
ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಒಂದು ಕೇಂದ್ರ ಸರ್ಕಾರ ನೇಮಕಾತಿಗೆ ಅರ್ಜಿ ಸಲ್ಲಿಸಿ ಇದರ ಉಪಯುಕ್ತ ಮಾಹಿತಿಗಳನ್ನು ತಿಳಿದುಕೊಂಡು ನಂತರ ಇದರ ಸದುಪಯೋಗಪಡಿಸಿಕೊಳ್ಳಿ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಜೂನ್ 12ನೇ ತಾರೀಖಿನ ಒಳಗಾಗಿ ಅರ್ಜಿ ಸಲ್ಲಿಸಿ.
ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ ಹಾಗೂ ಬಂಧುಗಳೇ ನಮ್ಮ ಈ ಜಾಲತಾಣದಲ್ಲಿ ದಿನನಿತ್ಯ ನಾವು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದು ಇಂದಿನ ಈ ಲೇಖನದಲ್ಲಿ ನಾವು ಕೇಂದ್ರ ಸರ್ಕಾರಿ ಉದ್ಯೋಗಗಳಾದ ರೈಲ್ವೆ ಇಲಾಖೆಯ ಉದ್ಯೋಗದ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಲಿದ್ದೇವೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಗ್ನೇಯ ರೈಲ್ವೆ ವಲಯದಲ್ಲಿ ಖಾಲಿ ಇರುವಂತಹ 1202 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ನೀಡಲಾಗಿದೆ.
ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಲಯದಲ್ಲಿ South Eastern Railway ನೇಮಕಾತಿ ಮಾಡಿಕೊಳ್ಳುತ್ತಿರುವ ಅಂತಹ 1202 ಹುದ್ದೆಗಳ ವಿವರ :
ಭಾರತೀಯ ರೈಲ್ವೆ ಇಲಾಖೆಯಲ್ಲಿ ಒಟ್ಟು 1202 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿವೆ.
- ಸಹಾಯಕ ಲೋಕ ಪೈಲೆಟ್ – 827 ಹುದ್ದೆಗಳಿಗೆ ಭರ್ತಿ
- ಟ್ರೈನ್ ಮ್ಯಾನೇಜರ್ – 375 ಹುದ್ದೆಗಳಿಗೆ ಭರ್ತಿ
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವಂತಹ ಶೈಕ್ಷಣಿಕ ವಿದ್ಯಾರ್ಹತೆಗಳು ಮತ್ತು ವಯೋಮಿತಿ ಅರ್ಹತೆಗಳು ಈ ಕೆಳಗಿನಂತೆ ನೀಡಲಾಗಿರುತ್ತದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇದರ ಒಂದು ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ.
ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಲಯದಲ್ಲಿ ಖಾಲಿ ಇರುವಂತಹ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಅಥವಾ ಡಿಪ್ಲೋಮಾ ಮುಗಿಸಿರುವಂತವರು ಅರ್ಜಿ ಸಲ್ಲಿಸಬಹುದು. ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರುವಂತವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂದು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುತ್ತಾರೆ.
ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆಗಳು:
ಒಂದು ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮುಗಿಸಿರುವುದು ಕಡ್ಡಾಯವಾಗಿರುತ್ತದೆ ಗರಿಷ್ಠ ವಯೋಮಿತಿಯನ್ನು ನೋಡುವುದಾದರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳ 42 ವರ್ಷ ಪೂರೈಸಿರಬೇಕು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳು 47 ವರ್ಷದ ಒಳಗಿರಬೇಕು ಹಾಗೂ ಹಿಂದುಳಿದ ವರ್ಗದ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳ 45 ವರ್ಷದ ಒಳಗಿರಬೇಕು.