ಭಾರತೀಯ ಸೇನೆಯಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ಸೇರಲು ಯುವಕರಿಗೆ ಭರ್ಜರಿ ಅವಕಾಶ : ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಿ..!

ಭಾರತೀಯ ಸೇನೆಯಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ಸೇರಲು ಯುವಕರಿಗೆ ಭರ್ಜರಿ ಅವಕಾಶ : ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು

ಭಾರತೀಯ ಸೇನೆಯಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ಸೇರಿದಂತೆ ವಿವಿಧ ಸಮವಸ್ತ್ರ ಧರಿಸುವ ಸರ್ಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸುವುದು ಹಲವಾರು ಯುವಕರ ಕನಸಾಗಿರುತ್ತದೆ. ಇಂತಹ ಯುವಕರಿಗೆ,

WhatsApp Group Join Now
Telegram Group Join Now

10ನೇ ತರಗತಿ ಪಾಸಾದ ಯುವಕರಿಗೆ ಭಾರತೀಯ ಸೇನೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇರಲು ಬೇಕಾಗಿರುವಂತಹ ತರಬೇತಿಯನ್ನು ಉಚಿತವಾಗಿ ನೀಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ.

ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರಾಜ್ಯದ ಯುವಕರಿಗೆ ಉಚಿತವಾಗಿ ತರಬೇತಿಯನ್ನು ನೀಡಲು ಕಾರ್ಯಕ್ರಮವನ್ನು ಕೈಗೊಂಡಿದ್ದು ಭಾರತೀಯ ಸೇನೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ಸಿಗಲು ಸಹಾಯವಾಗುವಂತೆ ಈ ತರಬೇತಿಗಳು ಅತ್ಯಂತ ಉಪಕಾರಿಯಾಗಲಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ತರಬೇತಿಯನ್ನು ನೀಡಲಾಗುತ್ತಿದ್ದು ಈ ತರಬೇತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಈ ಲೇಖಕದಲ್ಲಿ ನಿಮಗೆ ಸಂಪೂರ್ಣವಾಗಿ ತಿಳಿಸಲಿದ್ದೇವೆ.

ಈ ಉಚಿತ ತರಬೇತಿಗೆ ಅರ್ಜಿಯನ್ನು ಯಾರು ಸಲ್ಲಿಸಬಹುದು?

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇದಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದರು ಶಿಕ್ಷಣ ಮಂಡಳಿಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಕುಟುಂಬದ ವಾರ್ಷಿಕ ವರಮಾನವು 2.5 ಲಕ್ಷಕ್ಕಿಂತ ಕಡಿಮೆ ಇರಬಾರದು.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವಯೋಮಿತಿ ಅರ್ಹತೆಗಳ ವಿವರ :

ಸರ್ಕಾರದ ಈ ಉಚಿತ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 2004ರ ಜುಲೈ 10 ರಿಂದ 2007ರ ಜುಲೈ 10 ರ ಅವಧಿಯಲ್ಲಿ ಜನಿಸಿರುವಂತಹ ಅಭ್ಯರ್ಥಿಗಳು ಮಾತ್ರ ಈ ತರಬೇತಿಗೆ ಅರ್ಜಿ ಸಲ್ಲಿಸಲು ಸಂಪೂರ್ಣ ಅರ್ಹತೆಯನ್ನು ಹೊಂದಿರುತ್ತಾರೆ.

ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ನೀವು ಈ ಉಚಿತ ತರಬೇತಿ ಕಾರ್ಯಕ್ರಮವನ್ನು ನಿಗದಿಪಡಿಸಿರಬೇಕು ಕೊನೆಯ ದಿನಾಂಕದ ಒಳಗಾಗಿಯೇ ಅಂದರೆ ಜುಲೈ 10 ನೇ ತಾರೀಖಿನ ಒಳಗಾಗಿಯೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅರ್ಹರ್ ಇರುವ ಮತ್ತು ಆಸಕ್ತ ಇರುವ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ ಅಥವಾ ಉತ್ತರಕನ್ನಡ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಭೇಟಿ ನೀಡುವುದರ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಂಡು ಅಂಚೆ ಮುಖಾಂತರವೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಭಾರತೀಯ ಸೇನೆಯಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ಸೇರಲು ಯುವಕರಿಗೆ ಭರ್ಜರಿ ಅವಕಾಶ : ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು

Leave a Reply

Your email address will not be published. Required fields are marked *