Gnanagharjane.com
ಸ್ವಂತ ಮನೆ ಕಟ್ಟಿಕೊಳ್ಳಲು ಸರ್ಕಾರ ನೀಡುತ್ತಿದೆ ಭರ್ಜರಿ ಸಹಾಯಧನ ಮತ್ತು ಸಾಲ ಸಬ್ಸಿಡಿ : ಬೇಗನೆ ನೀವು ಅರ್ಜಿ ಸಲ್ಲಿಸಿ |
Pradhanmantri Aawas Yojana 2024
ದೇಶಾದ್ಯಂತ ಪ್ರತಿಯೊಬ್ಬರು ಸ್ವಂತ ಮನೆಯಲ್ಲಿ ವಾಸಿಸಲು ಸಹಾಯವಾಗುವಂತೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಬಡವರಿಗೆ ಸ್ವಂತ ಮನೆಯನ್ನು ವಿತರಿಸಲು ಸಹಾಯಧನ ಮತ್ತು ಸಬ್ಸಿಡಿ ಹಣದಲ್ಲಿ ಸಾಲವನ್ನು ನೀಡುತ್ತಿದೆ. ಯೋಜನೆಯ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಈಗಲೇ ತಿಳಿದುಕೊಂಡು ಅರ್ಜಿ ಸಲ್ಲಿಸಿ.
ಜ್ಞಾನ ಘರ್ಜನೆಯ ಜಾಲತಾನಕ್ಕೆ ಪ್ರತಿಯೊಬ್ಬರಿಗೂ ನಮಸ್ಕಾರಗಳು ನಮ್ಮ ಈ ಗಣೇಶ ಸಮೃದ್ಧಿ ಜಾಲತಾಣದಿಂದ ದಿನನಿತ್ಯ ಅನೇಕ ರೀತಿಯ ಉಪಯುಕ್ತ ಮಾಹಿತಿಗಳನ್ನು ನೀಡುತ್ತಿದ್ದೇವೆ.
ಕರ್ನಾಟಕ ಸರ್ಕಾರಿ ಯೋಜನೆಗಳು ಕೇಂದ್ರ ಸರ್ಕಾರ ಯೋಜನೆಗಳು ಸೇರಿದಂತೆ ಉದ್ಯೋಗಗಳ ಮಾಹಿತಿಯನ್ನು ಕೂಡ ನೀಡುತ್ತಿದ್ದು ಇವತ್ತಿನ ಈ ಒಂದು ಲೇಖನದಲ್ಲಿ ನಾವು ಕೇಂದ್ರ ಸರ್ಕಾರದ ಯೋಜನೆ ಆಗಿರುವಂತಹ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಿದ್ದೇವೆ.
ಯೋಜನೆಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಯಾವ ಯಾವ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ ಎಂಬ ಮಾಹಿತಿಯನ್ನು ಸೇರಿದಂತೆ ಸಂಪೂರ್ಣ ಒಂದು ಮಾಹಿತಿಯನ್ನು ನಾವು ಇವತ್ತಿನ ಈ ಲೇಖಕದಲ್ಲಿ ನಿಮಗೆ ತಿಳಿಸಲಿದ್ದೇವೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಲೇಖನವನ್ನು ಕೊನೆಯವರೆಗೂ ಓದಿ ಅರ್ಜಿ ಸಲ್ಲಿಸಿ.
ಯಾವುದು ಈ ಯೋಜನೆ?
ಭಾರತ ದೇಶದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವಂತಹ ಪ್ರತಿಯೊಬ್ಬ ಬಡ ಜನರು ಅಂತ ಮನೆಯಲ್ಲಿ ವಾಸಿಸಬೇಕು ಎಂಬ ಕನಸನ್ನು ಹತ್ತಿರಬೇಕೆಂದರೆ ಸರ್ಕಾರವು ಪ್ರಧಾನಮಂತ್ರಿಯವರು 2015 ರಲ್ಲಿ ಈ ಯೋಜನೆಯನ್ನು ಪ್ರಧಾನಮಂತ್ರಿ ಆವಾಸ್ ಯೋಜನೆ ಎಂಬ ಹೆಸರಿನಲ್ಲಿ ಜಾರಿಗೆ ತಂದರು. ಈ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಈ ವರ್ಷದ ಅವಧಿಯಲ್ಲಿ ನೀಡುತ್ತಿರುವಂತಹ ಅನುದಾನವನ್ನು ಶೇಕಡ 15ರಷ್ಟು ಹೆಚ್ಚಿಗೆ ಮಾಡಲಾಗಿದ್ದು ಸ್ವಂತ ಮನೆ ಹೊಂದುವವರೆಗೆ ಇದೊಂದು ಉತ್ತಮ ಅವಕಾಶವಾಗಿದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು?
ಕೇಂದ್ರ ಸರ್ಕಾರದ ಈ ಯೋಜನೆ ಆಗಿರುವಂತಹ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು. ಯೋಜನೆಯಲ್ಲಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಹಿಂದೆ ಯಾವುದೇ ರೀತಿಯ ವಸತಿ ಯೋಜನೆಯ ಅಡಿಯಲ್ಲಿ ನೋಂದಾಯಿತರಾಗಿರಬಾರದು. ಅದೇ ರೀತಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ವಾರ್ಷಿಕ ವರಮಾನವು 6 ಲಕ್ಷದ ಒಳಗಿರಬೇಕು.
ಯೋಜನೆಗೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು ಅವಶ್ಯಕವಾಗಿವೆ?
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಕೆಳಗಿನ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಆಧಾರ್ ಕಾರ್ಡ್ ವಿಳಾಸ ಪ್ರಮಾಣ ಪತ್ರ ಮೊಬೈಲ್ ನಂಬರ್ ಅಭ್ಯರ್ಥಿಯ ಬ್ಯಾಂಕ್ ಖಾತೆ ಪುಸ್ತಕ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
ಅರ್ಜಿ ಸಲ್ಲಿಸುವ ಮಾಹಿತಿ :
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವುದರ ಮುಖಾಂತರ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅಧಿಕೃತ ಜಾಲತಾಣ : httpd://pmaymis.gov.in/