Gnanagharjane.com
10ನೇ ತರಗತಿ ಪಾಸಾದವರಿಗೆ ಕೋರ್ಟ್ ನಲ್ಲಿ ಖಾಯಂ ಹುದ್ದೆಗಳ ಭರ್ಜರಿ ನೇಮಕಾತಿ : ಆಸಕ್ತರು ಬೇಗನೆ ಅರ್ಜಿ ಸಲ್ಲಿಸಿ Court Recruitment 2024
ಉತ್ತರ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿವಿಧ ಘಟಕಗಳಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು ಹತ್ತನೇ ತರಗತಿ ಪಾಸಾದವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ಅರ್ಜಿ ಸಲ್ಲಿಸುವಂತ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬೇಗನೆ ಈ ನೇಮಕಾತಿಗೆ ಅರ್ಜಿ ಸಲ್ಲಿಸಿ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ನಮ್ಮ ಈ ಜಾಲತಾಣದಿಂದ ಪ್ರತಿಯೊಬ್ಬರಿಗೂ ನಮಸ್ಕಾರಗಳು.
ನಮ್ಮ ಈ ಚಾಲತಾನದಲ್ಲಿ ದಿನನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತಹ ಉಪಯುಕ್ತ ಮಾಹಿತಿಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದಂತಹ ಮಾಹಿತಿಯನ್ನು ನೀಡುತ್ತಿದ್ದ ಇವತ್ತಿನ ಈ ಒಂದು ಲೇಖನದಲ್ಲಿ ನಾವು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಂಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಕುರಿತು ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸಲಿದ್ದೇವೆ. ಉದ್ಯೋಗ ಹುಡುಕುತ್ತಿರುವಂತಹ ಅಭ್ಯರ್ಥಿಗಳು ಈ ಒಂದು ಲೇಖನವನ್ನು ಕೊನೆಯವರೆಗೂ ತಡ ಮಾಡದೆ ಅರ್ಜಿ ಸಲ್ಲಿಸಿ.
Uttara Kannada District Court Recruitment : ಉತ್ತರ ಕನ್ನಡ ಜಿಲ್ಲೆಯ ನ್ಯಾಯಾಲಯದಲ್ಲಿ ನೇಮಕಾತಿ
ಹೌದು ಸ್ನೇಹಿತರೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಘಟಕದ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 26 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಈ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರವನ್ನು ನಾವು ನೋಡುವುದಾದರೆ ಹುದ್ದೆಗಳ ವಿವರವು ಈ ಕೆಳಗಿನಂತಿದೆ.
ಆದೇಶ ಜಾರಿಕಾರರು ಹುದ್ದೆಗಳು – 20
ಬೆರಳಚ್ಚುಗಾರರು – 03
ಬೆರಳಚ್ಚು ನಕಲುಗಾರರು – 03
ಒಟ್ಟು ಎಲ್ಲಾ ಹುದ್ದೆಗಳನ್ನು ಸೇರಿ 26 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದ್ದು ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಶೈಕ್ಷಣಿಕ ಅರ್ಹತೆಗಳು ಮತ್ತು ವಯೋಮಿತಿ ಅರ್ಹತೆಗಳ ವಿವರದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ.
ಶೈಕ್ಷಣಿಕ ಅರ್ಹತೆಗಳು ಮತ್ತು ವಯೋಮಿತಿ ಅರ್ಹತೆಗಳು : ಉತ್ತರ ಕನ್ನಡ ಜಿಲ್ಲೆ ನ್ಯಾಯಾಲಯ ಬಿಡುಗಡೆ ಮಾಡಿರುವಂತಹ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ ತರಗತಿ ಪಾಸಾದವರು ಅಥವಾ ದ್ವಿತೀಯ ಪಿಯುಸಿ ಪಾಸಾದವರ ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ.
ವಯೋಮಿತಿ ಅರ್ಹತೆಗಳು – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 35 ವರ್ಷದ ಒಳಗಿರುವ ಅಭ್ಯರ್ಥಿಗಳ ಅರ್ಜಿ ಸಲ್ಲಿಸಲು ಅರ್ಹರಿದ್ದಾರೆ.
ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಸಿಗುವ ವೇತನ – ₹21,400 ರಿಂದ ₹42,000 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕ –
ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 200ರೂ. ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ವರ್ಗದ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿರುವುದರಿಂದ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಜುಲೈ 2024 ಆಗಿರುತ್ತದೆ.